ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರ ಕಾರ್ಯಾಗಾರ ಹಾಗೂ ಉತ್ಸವ ಸಮಾವೇಶವನ್ನು ಸಂಭ್ರಮ ಹಾಗೂ ವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಿ

ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರ ಕಾರ್ಯಾಗಾರ ಹಾಗೂ ಉತ್ಸವ ಸಮಾವೇಶವನ್ನು  ಸಂಭ್ರಮ ಹಾಗೂ ವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಿ District Guarantee Implementation Authority takes steps to conduct the workshop and festival conven

 

ಗದಗ 13:  ಗದಗ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರ ಕಾರ್ಯಾಗಾರ ಹಾಗೂ ಉತ್ಸವ ಸಮಾವೇಶವು ಫೆಬ್ರುವರಿ 18 ರಂದು ಬೆಳಿಗ್ಗೆ 11  ಗಂಟೆಗೆ ನಗರದ ವಿವೇಕಾನಂದ ಸಭಾಭವನದಲ್ಲಿ ಜರುಗಲಿದ್ದು, ಈ ಉತ್ಸವ ಸಮಾವೇಶವನ್ನು ಸಂಭ್ರಮದಿಂದ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು  ಗದಗ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ತಿಳಿಸಿದರು. ನಗರದ  ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ  ಶುಕ್ರವಾರ  ಗದಗ ತಾಲೂಕು ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ  ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರ ಕಾರ್ಯಾಗಾರ ಹಾಗೂ ಉತ್ಸವ ಸಮಾವೇಶದ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ನೇತೃತ್ವವನ್ನು  ವಹಿಸಿ ಮಾತನಾಡಿದರು.   

ಪಂಚ ಗ್ಯಾರಂಟಿ ಯೋಜನೆಗಳ ರಾಜ್ಯ ಗ್ಯಾರಂಟಿ ಯೋಜನೆಗಳ  ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಂ.ರೇವಣ್ಣ,  ಉಪಾಧ್ಯಕ್ಷ ಎಸ್‌.ಆರ್‌.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಕೆ.ಪಾಟೀಲ   ಸೇರಿದಂತೆ  ವಿವಿಧ ಗಣ್ಯರುಗಳು, ಪ್ರಮುಖರು ಆಗಮಿಸಲಿದ್ದಾರೆ. ಕಾರ್ಯಕ್ರಮವು ಅರ್ಥಪೂರ್ಣವಾಗಿ ಜರುಗಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು  ಆಯಾ ಸಮಿತಿಯ ಅಧಿಕಾರಿಗಳು ತಮಗೆ ವಹಿಸಿಕೊಟ್ಟ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳ ಹಾಗೂ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಬಿಂಬಿಸುವ ಮಳಿಗೆಗಳನ್ನು (ಸ್ಟಾಲ್‌ಗಳನ್ನು) ನಿರ್ಮಿಸಲು ಕ್ರಮ ವಹಿಸಬೇಕು. ಸಮಾವೇಶ ಕಾರ್ಯಕ್ರಮವು ಯಾವುದೇ ಲೋಪದೋಷಗಳಿಲ್ಲದಂತೆ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಜರುಗುವಂತೆ ನೋಡಿಕೊಳ್ಳಬೇಕು ಎಂದರು.    

ಗದಗ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಯ ಪ್ರಗತಿಯು ಶೇ 99.04 ರಷ್ಟಾಗಿರುತ್ತದೆ. ಈ  ಸಮಾವೇಶವು ರಾಜ್ಯದಲ್ಲಿಯೇ ಮಾದರಿ ಸಮಾವೇಶವಾಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಸಮಾವೇಶದಲ್ಲಿ ಉತ್ಸಾಹದಿಂದ ಭಾಗವಹಿಸಿ ಸಮಾವೇಶಕ್ಕೆ  ಶೋಭೆ ತರಬೇಕು ಎಂದು ಬಿ.ಬಿ.ಅಸೂಟಿ ತಿಳಿಸಿದರು.   

ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾದಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ಮಾತನಾಡಿ  ಫೆಬ್ರುವರಿ 18 ರಂದು ಜರುಗುವ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರ ಕಾರ್ಯಾಗಾರ ಹಾಗೂ ಉತ್ಸವ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು. ಕಾರ್ಯಕ್ರಮದ ಸ್ಥಳವು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಸೂಕ್ತ ಆಸನದ ವ್ಯವಸ್ಥೆ,  ಕುಡಿಯುವ ನೀರಿನ ಸೌಲಭ್ಯ ಇರುವಂತೆ ನೋಡಿಕೊಳ್ಳಬೇಕು.  ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ  ಅರ್ಹ ಫಲಾನುಭವಿಗಳಿಗೆ ವಿಳಂಬವಿಲ್ಲದೇ ದೊರಕುವಂತಾಗಬೇಕು  ಎಂದರು. 

  ಸಭೆಯಲ್ಲಿ ಬ್ಯಾನರ್‌ಗಳ ಅಳವಡಿಕೆ, ಊಟ ಉಪಹಾರದ ವ್ಯವಸ್ಥೆ, ಎಲ್‌.ಇ.ಡಿ. ಅಳವಡಿಕೆ, ವೇದಿಕೆ ವ್ಯವಸ್ಥೆ, ಕುರಿತಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.   ತದನಂತರ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರ ಕಾರ್ಯಾಗಾರ ಹಾಗೂ ಉತ್ಸವ ಸಮಾವೇಶಕ್ಕೆ   ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆಯರ ವಲಯ ಮೇಲ್ವಿಚಾರಕಿಯರೊಂದಿಗೆ ಸಭೆ ಜರುಗಿಸಲಾಯಿತು. 

ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಹಾಗೂ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾದಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಅವರುಗಳು ಮಾತನಾಡಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಸಮಾವೇಶ ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಕರೆದುಕೊಂಡು ಬರಬೇಕು. ಸಮಾವೇಶದ ಮುಂಚಿನ ದಿನವಾದ ಫೆಬ್ರುವರಿ 17 ರಂದು ಎಲ್ಲ ಫಲಾನುಭವಿಗಳ ಮನೆಯ ಮುಂದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ  ಕುರಿತು  ರಂಗೋಲಿ ಹಾಕಿಸುವ ಕೆಲಸವಾಗಬೇಕು.  ರಂಗೋಲಿ ಬಿಡಿಸಿರುವದನ್ನು ವಾರ್ಡ ನಂ. ಸಮೇತ ಸಮಿತಿಯ ವಾಟ್ಸ್‌ಅಪ್ ಗ್ರೂಪ್‌ಗೆ  ಕಳುಹಿಸಬೇಕು ಎಂದು ತಿಳಿಸಿದರು. 

ಇದೇ ಸಂದರ್ಭದಲ್ಲಿ ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆದುಕೊಂಡು ಬರಲು ಸಾರಿಗೆ ವ್ಯವಸ್ಥೆ ಕುರಿತು ವಿಸ್ತೃತ ಚರ್ಚೆಯು ನಡೆಯಿತು.   ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ  ಶ್ರೀಮತಿ ಸಾವಿತ್ರಿ ಹೂಗಾರ, ಶಂಭು ಕಾಳೆ, ಮೀನಾಕ್ಷಿ ಬೆನಕಣ್ಣವರ, ದಯಾನಂದ ಪವಾರ, ಸಂಗಮೇಶ ಕೆರಕಲಮಟ್ಟಿ, ಭಾಷಾಸಾಬ ಮಲ್ಲಸಮುದ್ರ, ನಿಂಗಪ್ಪ ದೇಸಾಯಿ, ಸಂಗಮೇಶಹಾದಿಮನಿ, ರಮೇಶ ಹೊನ್ನಿಕಾಯ್ಕರ್, ದೇವರಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶಸಿಂಗ್ ಮಿಟಾಡೆ , ಮಲ್ಲಪ್ಪ ಬಾರಕೇರ , ಗ್ಯಾರಂಟಿ ಯೋಜನೆಗೆ ಸಂಬಂಧಿತ ಅಧಿಕಾರಿಗಳು ಹಾಜರಿದ್ದರು. 


Stall Setup for Schemes Beneficiaries Participation Program Structure Banner Food LED Setup