ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಪ್ರವಾಸ ಕಾರ್ಯಕ್ರಮ
ಗದಗ 17 : ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಜನೆವರಿ 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಇಂತಿದೆ.
ಜನೆವರಿ 19 ರಂದು ರಾಣೆಬೆನ್ನೂರಿನಿಂದ ರಸ್ತೆ ಮೂಲಕ ಗದುಗಿಗೆ ಮಧ್ಯಾಹ್ನ 3 ಗಂಟೆಗೆ ಆಗಮಿಸುವರು. ನಂತರ ಸಂಜೆ 4 ಗಂಟೆಗೆ ನಗರದ ಕಳಸಾಪುರ ರಸ್ತೆಯಲ್ಲಿ ಶ್ರೀ ಶಿವಾನಂದ ಕಲ್ಯಾಣ ಮಂಟಪದಲ್ಲಿ ಮಹಾಯೋಗಿ ವೇಮನ ಜಯಂತಿ-2025 ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ನವಲಗುಂದಕ್ಕೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.