ಅ.17 ರಂದು ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿ
District Level Kho-Kho Tournament on A.17
ಅ.17 ರಂದು ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿ
ತಾಳಿಕೋಟಿ 15: ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಮುದ್ದೇಬಿಹಾಳ ಹಾಗೂ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮೈಲೇಶ್ವರ(ತಾಳಿಕೋಟಿ) ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾವಳಿ ನಾಳೆ (ಅ.17)ರಂದು ನಡೆಯಲಿದೆ.
ಅಂದು ಬೆಳಿಗ್ಗೆ 8.30 ಘಂಟೆಗೆ ಮೈಲೇಶ್ವರದ ಬ್ರಿಲಿಯಂಟ್ ಶಾಲಾ ಆವರಣದಲ್ಲಿ ನಡೆಯಲಿರುವ ಈ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಪರೀವೀಕ್ಷಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಮುದ್ದೇಬಿಹಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ದೈಹಿಕ ಶಿಕ್ಷಣ ಪರೀವೀಕ್ಷಕರು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ದೈಹಿಕ ಶಿಕ್ಷಣ ಪರೀವೀಕ್ಷಕರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಎಲ್ಲಾ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ, ಕ್ರೀಡಾಪಟುಗಳು ಹಾಗೂ ತರಬೇತುದಾರರು ಉಪಸ್ಥಿತರಿರುವರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 