ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ

ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ District Level Rajyotsava Award to Journalist Mallikarjuna Pattanashetty


ದೇವರಹಿಪ್ಪರಗಿ 31:  ಮುದ್ರಣ ಮಾಧ್ಯಮ ರಂಗದಲ್ಲಿ ಕಳೆದ 08 ವರ್ಷಗಳಿಂದ ಸಲ್ಲಿಸಿದ ಸೇವೆ ಪರಿಗಣಿಸಿ ಕನ್ನಡಪ್ರಭ ದಿನಪತ್ರಿಕೆಯ ವರದಿಗಾರ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ  ಅವರನ್ನು ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಜಿಲ್ಲಾಡಳಿತ  ಜಿಲ್ಲಾ ಮಟ್ಟದ ರಾಜ್ಯೋತ್ಸವ ಗೌರವಕ್ಕೆ ಆಯ್ಕೆ ಮಾಡಿದೆ.ನ. 1 ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಡಳಿತದಿಂದ  ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಹಾಗೂ ಇತರ ಗಣ್ಯರು ಗೌರವ ಸನ್ಮಾನ ನೀಡಲಿದ್ದಾರೆ.ದೇವರಹಿಪ್ಪರಗಿ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಮಟ್ಟದಲ್ಲಿ ಇರುವ ಸಮಸ್ಯೆಗಳ ಕುರಿತು ಸಾಕಷ್ಟು ಬಾರಿ ಪತ್ರಿಕೆಯ ಮೂಲಕ ಗಮನ ಸೆಳೆಯುವುದು ಅಲ್ಲದೆ ವರದಿ ಫಲಶ್ರುತಿ ಕಂಡಿರುವುದು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ವಿಶೇಷ ಲೇಖನದ ಮೂಲಕ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದು ಜನರ ಸಮಸ್ಯೆಗಳಿಗೆ ಪತ್ರಿಕೆಯ ಮೂಲಕ ಸ್ಪಂದಿಸಿದ್ದಾರೆ.

ನಮ್ಮೂರ ಸುದ್ದಿ ವಾಹಿನಿ ಮೂಲಕ ಗ್ರಾಮೀಣ ಹಾಗೂ ಪಟ್ಟಣದ ಸಮಸ್ಯೆಗಳ ವರದಿ ಮಾಡುವ ಮೂಲಕ, ಪತ್ರಿಕಾ ರಂಗಕ್ಕೆ ಪದಾರೆ​‍್ಣ ಮಾಡಿ, ಭಾರತ ವೈಭವ ದಿನಪತ್ರಿಕೆ, ಉದಯವಾಹಿನಿ ಹಾಗೂ ಕನ್ನಡಪ್ರಭ ದಿನಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಸದ್ಯ ಕನ್ನಡಪ್ರಭ ದಿನಪತ್ರಿಕೆಯ  ದೇವರಹಿಪ್ಪರಗಿ ತಾಲೂಕು ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಜಿಲ್ಲಾಡಳಿತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಈ ಬಾರಿಯ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರ ಜೋತೆ ಪತ್ರಿಕಾರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಜಿಲ್ಲಾ ರಾಜ್ಯೋತ್ಸವ ಗೌರವಕ್ಕೆ ಆಯ್ಕೆ ಮಾಡಿದ್ದಾರೆ. ಈ ವರ್ಷ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದು ವಿಶೇಷವಾಗಿದೆ. ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರ ಪತ್ರಿಕಾರಂಗದ ಸಾಧನೆಯನ್ನು ಪರಿಗಣಿಸಿ ಜಿಲ್ಲಾ ರಾಜ್ಯೋತ್ಸವ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.