2025-26ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಯ ಸ್ಪರ್ಧೆಗಳು
District Level Teachers' Co-Curricular Activity Competitions for the year 2025-26
ಹೊಸಪೇಟೆ 13: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ವಿಜಯನಗರ ಜಿಲ್ಲೆ, ಹೊಸಪೇಟೆ ವತಿಯಿಂದ ವಿಜಯನಗರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಅಮರಾವತಿ ಹೊಸಪೇಟೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಸದ್ರಿ ಕಾರ್ಯಕ್ರಮವನ್ನ ಉಪ ನಿರ್ದೇಶಕರಾದ ವೇಂಕಟೇಶ್ ರಾಮಚಂದ್ರ್ಪರವರು ಉದ್ಘಾಟಿಸಿ ಮಾತನಾಡಿ ಶಿಕ್ಷಕರ ದೈನಂದಿನ ಪಾಠ ಪ್ರವಚನ ಒತ್ತಡಗಳಿಂದ ಸ್ವಲ್ಪ ಮಟ್ಟಿಗೆ ಒತ್ತಡವನ್ನು ದೂರ ಮಾಡಲು ಸಹ ಪಠ್ಯ ಚಟುವಟಿಕೆ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ ಶಿಕ್ಷಕರಲ್ಲಿ ಹಲವಾರು ಪ್ರತಿಭೆಗಳಿರುತ್ತವೆ. ಶಿಕ್ಷಕರು ತಮ್ಮಲ್ಲಿರುವ ಪ್ರತಿಭೆಯನ್ನ ಅನಾವರಣಗೊಳಿಸಲು ಇಲಾಖೆ ಒಳ್ಳೆಯ ಅವಕಾಶವನ್ನು ನೀಡಿದ್ದು, ಇದರ ಸದುಪಯೋಗ ಪಡೆಸಿಕೊಂಡು ರಾಜ್ಯ ಹಂತದಲ್ಲಿ ಭಾಗವಹಿಸಿ ಜಿಲ್ಲೆಯ ಶಿಕ್ಷಣ ಇಲಾಖೆಗೆ ಕೀರ್ತಿ ತರಬೇಕೆಂದರು.
ಕಾರ್ಯಕ್ರಮದ ನೋಡಲ್ ಅಧಿಕಾರಿಗಳಾದ ರಾಜಶೇಖರ್‌ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ ಆಶುಬಾಷಣ, ಭಕ್ತಿಗೀತೆ, ಸ್ಥಳದಲ್ಲಿ ಕಲಿಕೋಪಕರಣ ತಯಾರಿಕೆ, ರಸಪ್ರಶ್ನೆ ಸೇರಿದಂತೆ 07 ಸ್ಪರ್ಧೆಗಳನ್ನ ಆಯೋಜಿಸಲಾಗುತ್ತದೆ. ಇದರಲ್ಲಿ ವಿಜೇತರಾದವರು ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಬೇಕೆಂದು ತಿಳಿಸಿದರು. ಸ್ಪರ್ಧೆಗಳು ಮುಗಿದ ನಂತರ ವಿಜೇತರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಭಾರ ಪ್ರಾಚಾರ್ಯರಾದ ವೀಣಾಕುಮಾರಿ ರವರು ಮಾತನಾಡಿ ಶಿಕ್ಷಕರು ಮಕ್ಕಳ ಭವಿಷ್ಯವನ್ನ ರೂಪಿಸುವ ಶಿಲ್ಪಿಗಳಿದ್ದಂತೆ ಅಂತಹ ಶಿಕ್ಷಕರಲ್ಲಿ ಅನೇಕ ಪ್ರತಿಭೆಗಳಿದ್ದು, ಅವುಗಳನ್ನು ಹೊರತೆಗೆಯುವಲ್ಲಿ ಈ ಸ್ಪರ್ಧೆಗಳು ಪೂರಕವಾಗಿವೆ ಎಂದರು. ಕಾರ್ಯಕ್ರಮದಲ್ಲಿ ವಿಷಯ ಪರೀವೀಕ್ಷಕರಾದ ಹೆಚ್.ಎಂ.ವಿಶ್ವನಾಥ ಬಸವಂತಯ್ಯ ಹಿರೇಮಠ, ಪ್ರೌಢ ಶಾಲಾ ಮುಖ್ಯೋಪಾದ್ಯಾಯರಾದ ವೆಂಕಟೇಶ್ ಕುಲಕರಣಿ, ಪ್ರವೀಣಾ ಬಿ ಹಲಗಣಿ, ಸಂಘದ ಪದಾಧಿಕಾರಿಗಳಾದ ಸಿದ್ಧರಾಧ್ಯ, ಬಸವರಾಜ.ಕೆ. ಆರ್.ಬಿ. ಬಸವರಾಜ, ಟಿ.ವಿಶ್ವನಾಥ, ಕೆ.ಬಿ.ತಿಮ್ಮಪ್ಪ, ಸೇರಿದಂತೆ ಜಿಲ್ಲೆಯ ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮವನ್ನು ಕೆ.ಬಿ.ತಿಮ್ಮಪ್ಪ ಹಾಗೂ ಯೋಗಿಶ್ವರಿ ನಿರ್ವಹಿಸಿದರು. ಬಸವಂತಯ್ಯ ಹಿರೇಮಠಯ್ಯ ಸ್ವಾಗತಿಸಿದರು. ರಾಜೇಶ್ವರಿ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 