ಜಿಲ್ಲಾ ಪಿ.ಸಿ, ಪಿ.ಎನ್.ಡಿ.ಟಿ ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆ
ಕಾರವಾರ 20: ಜಿಲ್ಲಾ ಪಿ.ಸಿ ್ಘಪಿ.ಎನ್.ಡಿ.ಟಿ ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆಯು ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಮಾತನಾಡಿ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಪರೀಕ್ಷೆಗೆ ತೆರಳುವ ತಾಯಂದಿರ ಜೊತೆಯಲ್ಲಿ ಯಾರಿಗೂ ಒಳ ಪ್ರವೇಶಿಸಲು ಅನುಮತಿ ನೀಡಬಾರದು, ಪ್ರತಿ ಮೂರು ತಿಂಗಳಿಗೊಮ್ಮೆ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಸಮಿತಿಯಿಂದ ಕಡ್ಡಾಯವಾಗಿ ಭೇಟಿ ನೀಡಬೇಕು, ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಭ್ರೂಣಲಿಂಗ ಪತ್ತೆ ಮಾಡುವುದು ಅಪರಾಧದ ಕುರಿತು ನಾಮ ಫಲಕ ಅಳವಡಿಸುವುದು ಕಡ್ಡಾಯವಾಗಿದೆ ಎಂದರುಸಭೆಯಲ್ಲಿ ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರೀಶೀಲನೆ, ಪಿ.ಸಿ.ಪಿ.ಎನ್.ಡಿ.ಟಿ ಅನುಷ್ಠಾನ, ಹೊಸ ನೋಂದಣಿ ಮತ್ತು ನವೀಕರಣ ಕುರಿತಂತೆ ಸಲ್ಲಿಕೆಯಾದ ಅರ್ಜಿಗಳನ್ನು ಹಾಗೂ ಬಂದಿರುವ ದೂರಿನ ಕುರಿತು ಚರ್ಚಿಸಿ ಸಲಹೆ ಸೂಚನೆಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ. ಶಿವಾನಂದ ಕುಡ್ತರಕರ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಅನ್ನಪೂರ್ಣ ವಸ್ತ್ರದ, ಸಮಿತಿ ಸದಸ್ಯರಾದ ಶ್ರೀಕಾಂತ ಎಂ ನಾಯ್ಕ, ಮತ್ತಿತರರು ಇದ್ದರು.