ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಜಿಲ್ಲಾಡಳಿತದಿಂದ ಸ್ವಾಗತ: ಬೀಳ್ಕೊಡುಗೆ
District administration welcomes Kittur Rani Chennamma Vijayajyoti Yatra: Farewell
ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಜಿಲ್ಲಾಡಳಿತದಿಂದ ಸ್ವಾಗತ: ಬೀಳ್ಕೊಡುಗೆ
ವಿಜಯಪುರ 16: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ತ ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಯು ಜಿಲ್ಲೆಗೆ ಬುಧವರ ಆಗಮಿಸಿತು. ವಿಜಯಪುರಕ್ಕೆ ಆಗಮಿಸಿದ ವಿಜಯ ಜ್ಯೋತಿ ಯಾತ್ರೆಯ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಪೂಜೆ ಸಲ್ಲಿಸಿ ಕಿತ್ತೂರ ರಾಣಿ ಚನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ವೀರ ರಾಣಿ ಚನ್ನಮ್ಮ ಅವರ ಧೈರ್ಯ, ಶೌರ್ಯ ಮತ್ತು ಹೋರಾಟದ ಸ್ಫೂರ್ತಿಯನ್ನು ವಿಜಯ ಜ್ಯೋತಿ ಯಾತ್ರೆ ಮೂಲಕ ಜನರಿಗೆ ತಿಳಿಸಿಕೊಡುವುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಹೇಳಿದರು.
ವಿಜಯ ಜ್ಯೋತಿ ಯಾತ್ರೆಯ ಮೆರವಣಿಗೆಯು ವಿವಿಧ ಜಾನಪದ ಕಲಾ ತಂಡಗಳಿಂದ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭಗೊಂಡು ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಾಗಿತು.ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರಕ್ಕೆ ಆಗಮಿಸಿದ ರಥ ಯಾತ್ರೆ ಬೆಳಗಾವಿ ಜಿಲ್ಲೆಯ ಅಥಣಿಗೆ ಬೀಳ್ಕೊಡಲಾಯಿತು.ಬೆಳಗಾವಿ ಕಿತ್ತೂರಿನಲ್ಲಿ ಅಕ್ಟೋಬರ್ 23 ರಿಂದ 25ರವರೆಗೆ ನಡೆಯಲಿರುವ ಕಿತ್ತೂರ ಉತ್ಸವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚಿಸುವ ಈ ವಿಜಯ ಜ್ಯೋತಿ ಯಾತ್ರೆ ಜಿಲ್ಲೆಯಿಂದ ಬೆಳಗಾವಿ ಜಿಲ್ಲೆಗೆ ಬೀಳ್ಕೊಡಲಾಯಿತು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಡಿವೈಎಸ್‌ಪಿ ಬಸವರಾಜ್ ಯಲಿಗಾರ, ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್.ಜೆ.ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಶಿಕ್ಷಣ ಇಲಾಖೆಯ ವಿಷಯ ಪರೀವೀಕ್ಷಕರಾದ ಶಿವಾನಂದ ಬ್ಯಾಹಟ್ಟಿ, ಬಿ.ಎಮ್ ಪಾಟೀಲ,ಗುರುಶಾಂತ ನಿಡೋಣ, ಎಸ್.ವಿ.ಪಾಟೀಲ, ನಿಂಗನಗೌಡ ಸೋಲಾಪೂರ, ಸುರೇಶ ಬಿರಾದಾರಮ ಸಂಜುಗೌಡ ಪಾಟೀಲ, ಶ್ರೀಶೈಲ ಮುಳಜಿ, ಶೋಭಾ ಬಿರಾದಾರ, ಸಿದ್ಧನಗೌಡ ಪೊಲೀಸ್ ಪಾಟೀಲ, ನಿಂಗಪ್ಪ ಸಂಗಾಪೂರ, ಬಸನಗೌಡ ಬಿರಾದಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 