ನಾನಾಗೌಡ ಪಾಟೀಲ ಗೆ ಜಿಲ್ಲಾ ಮಟ್ಟದ ‘ಶಿಕ್ಷಕ ರತ್ನ’ ಪ್ರಶಸ್ತಿ
District level 'Shikshaka Ratna' award to Nanagowda Patila
ನಾನಾಗೌಡ ಪಾಟೀಲ ಗೆ ಜಿಲ್ಲಾ ಮಟ್ಟದ ‘ಶಿಕ್ಷಕ ರತ್ನ’ ಪ್ರಶಸ್ತಿ
ದೇವರಹಿಪ್ಪರಗಿ 10: ಪಟ್ಟಣದ ತಾಳಿಕೋಟೆ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಸರ್ವೋದಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆಯ ಅಧ್ಯಕ್ಷರಾದ ನಾನಾಗೌಡ ಪಾಟೀಲ ಅವರು ಜಿಲ್ಲಾ ಮಟ್ಟದ ‘ ಶಿಕ್ಷಕ ರತ್ನ’ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಮಂಗಳವಾರ ದಂದು ಹಮ್ಮಿಕೊಂಡಿದ್ದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಹಾಗೂ ಗುರುವಂದನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಹಾಗೂ ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ್ ಕಟಕಧೋಂಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ದಶಕಗಳ ಕಾಲ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಜಿಲ್ಲಾ ಶಿಕ್ಷಕ ರತ್ನ ಪ್ರಶಸ್ತಿ ನೀಡಿ, ಸನ್ಮಾನಿಸಿ, ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷರಾದ ಎಸ್.ಎಸ್.ಹಾವಿನಾಳ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ದಯಾನಂದ ಕಟ್ಟಿಮನಿ ಸೇರಿದಂತೆ ರಾಜಕೀಯ ಮುಖಂಡರು, ಗಣ್ಯರು, ಸ್ವಾಮೀಜಿಗಳು, ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 