ಕ್ರೀಡಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮ
District level art festival program organized by Kannada and Culture Department at the stadium
ಹೊಸಪೇಟೆ 30: ಇಂದು ಹೊಸಪೇಟೆಯ ವಿಜಯನಗರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ 2025 ರ ಉಧ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹೆಚ್. ಎನ್. ಮೊಹಮ್ಮದ್ ಇಮಾಮ್ ನಿಯಾಜಿ ಅವರು ಭಾಗವಹಿಸಿ ಉದ್ಘಾಟಿಸುವ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವದಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ, ಯುವ ಪ್ರತಿಭೆ, ನಾಟಕ ಸಮೂಹ ಸ್ಪರ್ಧೆಗಳಲ್ಲಿ ಭಾವಹಿಸುತ್ತಿರುವ ಎಲ್ಲರಿಗು ಶುಭ ಹಾರೈಕೆಗಳನ್ನು ತಿಳಿಸಿದರು.
ಜೀವನದಲ್ಲಿ ಅಂಕಗಳೇ ಅಂತಿಮ ಅಲ್ಲ, ಅಂಕಗಳು ಹಾಗು ಪುರಸ್ಕಾರಗಳ ಜೊತೆಗೆ ಮಕ್ಕಳು ತಮ್ಮ ಪ್ರತಿಭೆಯನ್ನು ಅನಾವರಣಗೊಸಬೇಕು. ಇಂದು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸರಕಾರ ಸಾಕಷ್ಟ ಸೌಲಭ್ಯಗಳನ್ನು ಒದಗಿಸಿದೆ ಅದನ್ನು ಮಕ್ಕಳು ಸದುಪಯೋಗ ಪಡಿಸಿಕೊಂಡು ಶಿಕ್ಷಣವನ್ನು ಪೂರ್ತಿಗೊಳಿಸಬೇಕು ಯಾವುದೇ ಕಾರಣಕ್ಕೂ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಬಾರದು. ಉತ್ತಮ ಸುಶಿಕ್ಷಕರಾಗಿ ಉತ್ತಮ ನಾಗರಿಕರಾಗಿ ರಾಜ್ಯದ ಅಭಿವೃದ್ಧಿಗೆ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾಗ ಬೇಕಾಗಿರುತ್ತದೆ. ಹಾಗೂ ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬ ನಾಣ್ಣುಡಿಯಂತೆ ಮಕ್ಕಳ ಒಳಗಿರುವ ಪ್ರತಿಭೆಯನ್ನು ಪಾಲಕರು ಪೋಷಕರು ಮತ್ತು ಶಿಕ್ಷಕರು ಗುರುತಿಸಿದಲ್ಲಿ ಮಾತ್ರ ಸಾರ್ಥಕವಾಗುತ್ತದೆ.
ವಿಶೇಷವಾಗಿ ವಿದ್ಯಾರ್ಥಿಗಳು ಸಹ ಅನಾವಶ್ಯಕ ಸಮಯವನ್ನ ವ್ಯರ್ಥ ಮಾಡದೆ ಮೊಬೈಲ್ ಗಳಿಗೆ ಅಡಿಕ್ಟ್ ಆಗದೆ ಯಾವುದೇ ರೀತಿಯ ದುಶ್ಚಟಗಳಿಗೆ ಹಾಗು ಮಾದಕ ವಸ್ತುಗಳಿಗೆ ಬಲಿಯಾಗದೆ ಉತ್ತಮ ದಿನನಿತ್ಯದ ಹವ್ಯಾಸಗಳನ್ನು ರೂಪಿಸಿಕೊಳ್ಳಬೇಕು ಆಟ ಪಾಠ ಕ್ರೀಡೆಗಳಲ್ಲಿ ಹೆಸರು ಮಾಡಿ ಜನ್ಮ ಕೊಟ್ಟ ತಂದೆ ತಾಯಿಗಳಿಗೂ ಹಾಗೂ ಪಾಲಕರಿಗೂ ಪೋಷಕರಿಗೂ ನಿದ್ದೆ ಕಳಿಸಿದ ಶಿಕ್ಷಕರಿಗೂ ಗೌರವ ತರುವಂತ ಕೆಲಸ ಮಾಡಬೇಕೆಂದು ತಿಳುವಳಿಕೆ ಹೇಳಿದರು.
ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳುವ ಯಾವುದೇ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಮೊದಲ ಆದ್ಯತೆ ನೀಡಬೇಕೆಂದು ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ ರಂಗಣ್ಣನವರಿಗೆ ಮನವಿ ಮಾಡಿದರು. ಇದೇ ಸಂಧರ್ಭದಲ್ಲಿ ಹೊಸಪೇಟೆ ನಗರಸಭಾ ಅಧ್ಯಕ್ಷರಾದ ರೂಪೇಶ್ ಕುಮಾರ್ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಅಲ್ಲಾಭಕ್ಷಿ ಅವರು ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ ರಂಗಣ್ಣನವರು ಹಾಗೂ ಪಂಡಿತ್ ವೆಂಕಟೇಶ್, ಶೇಖರ್ ಗಿರಟ್ಟಿ, ಹಾಗೂ ವಿವಿಧ ಕಲಾ ಸಾಹಿತ್ಯ ರಂಗಭೂಮಿ ಕಲಾವಿದರು ಹಾಗೂ ಮಕ್ಕಳು ಪಾಲಕರು ಪೋಷಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 