ಪ್ರಾ.ಕೃಷಿ ಪತ್ತಿನ ಸ.ಸಂಘಕ್ಕೆ ಜಿಲ್ಲಾ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
District level best cooperative society award for the Provincial Agricultural Cooperative Society
ಕಂಪ್ಲಿ 22: ಕಂಪ್ಲಿ ಕ್ಷೇತ್ರದ ಸೋಮಲಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜಿಲ್ಲಾ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಸೋಮವಾರ ನೀಡಿ ಗೌರವಿಸಿದರು. ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತವು ಹೊಸಪೇಟೆಯಲ್ಲಿ ಏರಿ್ಡಸಿದ್ದ ರಾಜ್ಯ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸೋಮಲಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಬಳ್ಳಾರಿ ಜಿಲ್ಲಾ ಸಹಕಾರ ಚಳುವಳಿಯ ಬೆಳವಣಿಗೆಯಲ್ಲಿ ಸಂಘವು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಹೊಸಪೇಟೆಯ ಸುರಭಿ ಕಲ್ಯಾಣ ಮಂಟಪದಲ್ಲಿ ಕ ನಡೆದ ಸಮಾರಂಭದಲ್ಲಿ ಸೋಮಲಾಪುರ ಸಹಕಾರ ಸಂಘದ ಅಧ್ಯಕ್ಷರಾದ ಬಿ.ಶಿವರಾಜ ಹಾಗೂ ಮುಖ್ಯ ಕಾರ್ಯನಿರ್ವಾಹಕರಾದ ಗೌಡ್ರು ಡಿಂಡಿ ಮಹರ್ಷಿ ಇವರುಗಳಿಗೆ ಗಣ್ಯರು ಉತ್ತಮ ಸಹಕಾರ ಸಂಘದ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಗುಂಡುಮುಣುಗು ತಿಪ್ಪೇಸ್ವಾಮಿ, ಉಪಾಧ್ಯಕ್ಷರಾದ ದ್ವಾರುಕೇಶ್, ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶೀವ ಪ್ರಸಾದ ಸ್ವಾಮಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ.ಮೂಕಯ್ಯ ಸ್ವಾಮಿ, ಎಲ್.ಎಸ್.ಆನಂದ್, ನಾಯಕ ಹುಲುಗಪ್ಪ, ಬಿಡಿಸಿಸಿ ಬ್ಯಾಂಕ್ ಎಂಡಿ ಜೈಪ್ರಕಾಶ್, ಡಿಆರ್ ವೀರಭದ್ರಯ್ಯ ಸ್ವಾಮಿ, ಎಆರ್ ಗ್ಯಾನಪ್ಪ, ಬಿ.ಯು.ಅಂಜಿನಪ್ಪ, ಮೆಟ್ರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಧ್ಯಕ್ಷ ಹೊಸಕೋಟೆ ಜಗದೀಶ್, ಸದಸ್ಯರಾದ ನಾಗರಾಜ ಸೇರಿದಂತೆ ವಿವಿಧ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರು, ಅಧ್ಯಕ್ಷರು, ನಿರ್ದೇಶಕರುಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 