ಮು.ಗು ಹೊಸಗೇರ್ಪಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ
District level best teacher award for M.G. Hosagerpa
ಕಂಪ್ಲಿ 26: ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕಂಪ್ಲಿ-ಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಹೊಸಗೇರ್ಪ ಇವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದರು.ಪ್ರಶಸ್ತಿ ಪುರಸ್ಕೃತ ಹೊಸಗೇರ್ಪ ಮಾತನಾಡಿ, ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಜೊತೆಗೆ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಾ ಬಂದ ಹಿನ್ನಲೆ ನಮ್ಮ ಸೇವೆಯನ್ನು ಗುರುತಿಸಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿರುವುದು ಮತ್ತಷ್ಟು ಸೇವೆಗೆ ಪ್ರೋತ್ಸಾಹ ನೀಡುವ ಜೊತೆಗೆ ಖುಷಿ ತಂದಿದೆ. ಈ ಪ್ರಶಸ್ತಿಯೊಂದಿಗೆ ಮುಂದಿನ ದಿನದಲ್ಲಿಯೂ ಇನ್ನಷ್ಟು ಉತ್ತಮ ಸೇವೆಗಳನ್ನು ಮಾಡಲಾಗುವುದು ಎಂದರು.ಈ ಸಂದರ್ಭದಲ್ಲಿ ಗಣ್ಯರು ಪಾಲ್ಗೊಂಡಿದ್ದರು.
ಸ.ಹಿ.ಪ್ರಾ ಶಾಲೆಯಲ್ಲಿ ಪ್ರಶಸ್ತಿ ಪುರಸ್ಕೃತ ಹೊಸಗೇರ್ಪ ಇವರನ್ನು ಶುಕ್ರವಾರ ಸನ್ಮಾನಿಸಿ ಗೌರವಿಸಲಾಯಿತು. ನಂತರ ಸ್ವಾಮಿ ವಿವೇಕಾನಂದ ಶಾಲೆಯ ಮುಖ್ಯಗುರು ಬಡಿಗೇರ ಜಿಲಾನ ಮಾತನಾಡಿ, ಕಂಪ್ಲಿ ತಾಲೂಕಿನ ನಂ.10 ಮುದ್ದಾಪುರ ಸ.ಹಿ.ಪ್ರಾ ಶಾಲೆಯಲ್ಲಿ 1999ರಿಂದ 2016ವರೆಗೆ ಸತತ 15 ವರ್ಷ ಸೇವೆ ಸಲ್ಲಿಸಿದ್ದಾರೆ. ನಂತರ ಕಂಪ್ಲಿ-ಕೋಟೆಯ ಸರ್ಕಾರಿ ಶಾಲೆಯಲ್ಲಿ 2016ರಿಂದ ಇಲ್ಲಿವರೆಗೂ ಸೇವೆ ಮಾಡುತ್ತಾರೆ. ಪ್ರತಿ ವರ್ಷದಲ್ಲಿ ನೀಡುವ ಪ್ರಶಸ್ತಿ ಅಸಮಾಧಾನಿತವಾಗಿದೆ. ಕಲ್ಯಾಣ ನಿಧಿಗೆ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಯಿಂದ ನಿಧಿ ಕಟ್ಟಲಾಗುತ್ತಿದೆ. ಆದ್ದರಿಂದ ಶಿಕ್ಷಕರ ಕಲ್ಯಾಣ ನಿಧಿಯಿಂದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಯ ಒಬ್ಬರಿಗೆ ಜಿಲ್ಲಾ ಮಟ್ಟ ಉತ್ತಮ ಪ್ರಶಸ್ತಿ ನೀಡಬೇಕೆಂಬ ಹಕ್ಕೋತ್ತಾಯ ಮಾಡಿದರು.ಹಿರಿಯ ಶಿಕ್ಷಕ ಚಂದ್ರಶೇಖರ, ಮುಖಂಡ ಹುಸೇನ್ ಸಾಬ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 