ಸುಭಾಷ್ ಚಂದ್ರ ಬೋಸ್ ರವರ 128ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು
ಬಳ್ಳಾರಿ 19: ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿ ವತಿಯಿಂದ ಸ್ವಾತಂತ್ಯ್ರ ಸಂಗ್ರಾಮದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜನ್ಮದಿನಾಚರಣೆ ಸಂರ್ಭದಲ್ಲಿ ಎಐಡಿಎಸ್ಓ ವತಿಯಿಂದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ಪ್ರಬಂಧ, ರಸಪ್ರಶ್ನೆ, ಸ್ವರಚಿತ ಕವನ, ಗಾಯನ, ಭಾಷಣ ಹಾಗೂ ಚಿತ್ರಕಲೆ ನಗರದ ಮೇಧಾ ಪದವಿ ಮಹಾವಿದ್ಯಾಲಯ ಆಯೋಜಿಸಲಾಗುತ್ತು. ಕರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಅಧ್ಯಕ್ಷರು ಆರ್. ಸೋಮಶೇಖರ್ ಗೌಡ ಅವರು ಮಾತನಾಡಿ... ವಿದ್ಯರಿ್ಥಗಳಲ್ಲಿ ಉನ್ನತ ನೀತಿ-ನೈತಿಕತೆ-ಸಂಸ್ಕೃತಿಯನ್ನು ಮೇಲೆತ್ತುವ ಅವಶ್ಯಕತೆ ಇದೆ, ಈ ಜವಾಬ್ದಾರಿ ಎಲ್ಲರ ಮೇಲಿದೆ. “ಮಿಲಿಯಾಂತರ ಭಾರತೀಯರ ಪರವಾಗಿ ನಿಂತು, ಸ್ವಾತಂತ್ಯ್ರದ ಧ್ಯೇಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ಧನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊಂದು ದಿನ ನನ್ನ ಮನಸ್ಸಿನ ಭಾವನೆಗಳನ್ನು ರ್ಥ ಮಾಡಿಕೊಳ್ಳುತ್ತಾರೆ.” ಎಂಬುದು ಸ್ವಾತಂತ್ಯ್ರ ಸಂಗ್ರಾಮದ ಜ್ವಾಲೆಗೆ ತನ್ನ ರಕ್ತ ರ್ಪಣ ಮಾಡಿದ ಧೀರನೊಬ್ಬನ ನುಡಿಗಳು! ಆ ಧೀರನೇ, ನೇತಾಜಿ ಸುಭಾಷ್ ಚಂದ್ರ ಬೋಸ್. ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಅಧಃಪತನ ಹೊಂದುತ್ತಿರುವ ಪ್ರಸಕ್ತ ಸಾಮಾಜಿಕ ಪರಿಸ್ಥಿತಿಯಲ್ಲಿ ವಿದ್ಯರಿ್ಥಗಳ ನಡುವೆ ಸ್ವಾತಂತ್ಯ್ರ ಹೋರಾಟದ ಮಹಾನ್ ಕ್ರಾಂತಿಕಾರಿಗಳಾದ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್ ಹಾಗೂ ಇನ್ನಿತರ ಉನ್ನತ ವಿಚಾರ, ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯರಿ್ಥಗಳ ನಡುವೆ ಕೊಂಡ್ಯೊಯ್ಯುವುದು ಅತ್ಯವಶ್ಯಕ ಎಂದರು. ಎಐಡಿಎಸ್ ಜಿಲ್ಲಾ ಕರ್ಯರಿ್ಶ ಕಂಬಳಿ ಮಂಜುನಾಥ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂರ್ದದಲ್ಲಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷರು ಕೆ. ಈರಣ್ಣ, ಉಪಾಧ್ಯಕ್ಷರು ಎಂ.ಶಾಂತಿ, ಹಾಗೂ ಜಿಲ್ಲಾ ಖಜಾಂಚಿಗಳು ಅನುಪಮಾ ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.