ಕೊಪ್ಪಳ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಜಿಲ್ಲಾ ಮಟ್ಟದ ಸಭೆ

ಕೊಪ್ಪಳ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಜಿಲ್ಲಾ ಮಟ್ಟದ ಸಭೆ District level meeting of Koppal District Annual Draft Development Plan

  ಕೊಪ್ಪಳ 01:  ಜನಪ್ರತಿನಿಧಿಗಳು ನಿಸ್ವಾರ್ಥದಿಂದ ಜನರ ಸೇವೆ ಮಾಡಿದರೆ ಅವರು ನಮಗೆ ಯಾವಾಗಲೂ ಆಶೀರ್ವಾದ ಮಾಡುತ್ತಾರೆ. ಹಾಗಾಗಿ ನಮ್ಮ ಸೇವೆ ಯಾವಾಗಲೂ ಜನಪರವಾಗಿರಬೇಕೆಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್‌. ಪಾಟೀಲ್ ಹೇಳಿದರು. ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಕೊಪ್ಪಳ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

          ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಮಾತನಾಡಿ, ಅಧಿಕಾರ ವಿಕೇಂದ್ರೀಕರಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಿಂತ್ತಲೂ ಪೂರ್ವದಲ್ಲಿ ರಾಮಕೃಷ್ಣ ಹೆಗಡೆ ಯವರು ಮುಖ್ಯಮಂತ್ರಿ ಮತ್ತು ನಜೀರ್ ಸಾಹೇಬರು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ನಮ್ಮ ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಯಲ್ಲಿತ್ತು.   ಅದರ ನಂತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ತ್ರಿ ಟಯರ್ ಸಿಸ್ಟಮ್ ಪ್ರಕಾರದಲ್ಲಿ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ವ್ಯವಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದರ ಮುಖ್ಯ ಉದ್ದೇಶ, ಗ್ರಾ.ಪಂ ಅಥವಾ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿ, ಅನುದಾನವನ್ನು ಜನರಿಗೆ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಯೋಜನೆ ಮಾಡುವಂತಹ ಸ್ವಯತ್ತತೆ ನೀಡುವುದು ಮತ್ತು ಯೋಜನೆಯನ್ನು ರೂಪಿಸಿ, ಅನುಷ್ಠಾನ ಮಾಡುವ ಜವಾಬ್ದಾರಿಯನ್ನು ಸ್ಥಳೀಯವಾಗಿ ಆಯ್ಕೆಯಾದ ಜನಪ್ರತಿನಿಧಿಗಳು ಮಾಡಲಿ ಎಂಬುವುದಾಗಿದೆ ಎಂದರು.

             ಈ ಸಭೆಯಲ್ಲಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಜಿಲಾ ಮಟ್ಟದ ಅಧಿಕಾರಿಗಳು ಜಿಲ್ಲೆಯ 153 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರು, 9 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರುಗಳು, ಆಡಳಿತಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಯೋಜನಾಧಿಕಾರಿಗಳು, ಯೋಜನಾ ನಿರ್ದೇಶಕರು, ನಗರಸಭೆ ಪೌರಾಯುಕ್ತರು, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.