ನ.29 ರಂದು ಜಿಲ್ಲಾಮಟ್ಟದ ಯುವಜನೋತ್ಸವ
ವಿಜಯನಗರ (ಹೊಸಪೇಟೆ) 25: ಪ್ರಸಕ್ತ ಸಾಲಿನ ವಿಜಯನಗರ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನ.29 ರಂದು ಬೆಳಿಗ್ಗೆ 8.30 ಗಂಟೆಗೆ ಜಿಲ್ಲಾ ಕ್ರೀಡಾಂಗಣದ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ ಎಂದು ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ತಿಳಿಸಿದ್ದಾರೆ.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಆಯೋಜಿಸಲಾಗಿದೆ. ಸ್ಪರ್ಧಾಳುಗಳು 15 ರಿಂದ 29 ವರ್ಷ ವಯೋಮಿತಿಯೊಳಗಿರಬೇಕು. ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಬಹುದು. ನ.27 ರೊಳಗೆ ತಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪುಸ್ತಕದ ನಕಲು ಪ್ರತಿಯೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ವಿಜೇತ ತಂಡ ಮತ್ತು ವೈಯಕ್ತಿಕ ಸ್ಪರ್ಧೆ ವಿಜೇತರಿಗೆ ನಿಯಮಾನುಸಾರ ನಗದು ಪುರಸ್ಕಾರ ನೀಡಲಾಗುವುದು (ಒಟ್ಟು 60 ಸಾವಿರ ನಗದು ಬಹುಮಾನ) ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ಹಾಗೂ ಪ್ರಯಾಣ ಭತ್ಯೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆಗಳ ವಿವರ : ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವೀನ್ಯತೆ ವಿಷಯಾಧಾರಿತ ಸ್ಪರ್ಧೆಗಳು (ವಕಿಂರ್ಗ್ ಮಾಡೆಲ್) ವೈಯಕ್ತಿಕ ಮತ್ತು ಗುಂಪು, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ ತಂಡ ಹಾಗೂ ವೈಯಕ್ತಿಕ ಜನಪದ ನೃತ್ಯ (1+4=5ಜನರು), ಜನಪದಗೀತೆ (1+4=5ಜನರು) ಗುಂಪು (10ಜನರು), ಜೀವನ ಕೌಶಲ್ಯ ವಿಭಾಗದಲ್ಲಿ ಕನ್ನಡ, ಆಂಗ್ಲ, ಹಿಂದಿ ಹಾಗೂ ಭಾಷೆಯಲ್ಲಿ ಕವಿತೆ (1000 ಪದಗಳಿಗೆ ಮೀರದಂತೆ) ಬರೆಯುವ ಮತ್ತು ಕಥೆ ಬರೆಯುವ ಸ್ಪರ್ಧೆ ಇರುತ್ತದೆ. ಚಿತ್ರಕಲೆ ಸ್ಪರ್ಧೆ ವೈಯಕ್ತಿಕ. ಆಯ್ದ ವಿಷಯಗಳ ಬಗ್ಗೆ ಮೂರು ನಿಮಿಷಗಳ (ರಾಷ್ಟ್ರಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿ ಮತ್ತು ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದವರೆಗೆ ಕನ್ನಡ ಭಾಷೆಯನ್ನು ಸೀಮಿತಗೊಳಿಸಿ) ಭಾಷಣ ಸ್ಪರ್ಧೆಯನ್ನು ಏರಿ್ಡಸಲಾಗಿದೆ.ವಿಜಯನಗರ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ಹೆಸರು ನೊಂದಾಯಿಸಲು ಹೆಚ್ಚಿನ ಮಾಹಿತಿಗಾಗಿ : ಕ್ರೀಡಾ ಇಲಾಖೆ ಜಗದೀಶ ಹಿರೇಮಠ 9483480101, ಮೋಂಟು ಪತ್ತಾರ ನೆಹರು ಯುವ ಕೇಂದ್ರ 9049487027, ಗುಂಡಿ ರಮೇಶ ಜಿಲ್ಲಾಧ್ಯಕ್ಷರು 9164700036, ಮಂಜುನಾಥ ಗೊಂಡಬಾಳ ವಿಭಾಗೀಯ ಸಂಚಾಲಕರು 9448300070 ರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.