ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಪ್ರಚಾರಕ್ಕೆ ಮಾರುಹೋಗಬೇಡಿ, ಗುಣಮಟ್ಟ ನೋಡಿ ವಸ್ತು ಖರೀದಿಸಿ: ವೆಂಕಟೇಶ್

ಹಾವೇರಿ24: ಕೇವಲ ಪ್ರಚಾರಕ್ಕೆ ಮಾರುಹೋಗಿ ವಸ್ತುಗಳನ್ನು ಖರೀದಿಸದೇ ಅವುಗಳ ಗುಣಮಟ್ಟದ ಬಗ್ಗೆ ಜಾಗೃತವಹಿಸುವುದು ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ಅವರು ಗ್ರಾಹಕರಿಗೆ ಸಲಹೆ ನೀಡಿದರು.

       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ, ಚೈತನ್ಯ ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಹಾವೇರಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣ  ಆಯೋಜಿಸಲಾದ "ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2018" ಕಾರ್ಯಕ್ರಮ ಉದ್ಘಾಟಿಸಿದರು.

     ಸಾರ್ವಜನಿಕರು ಮಾರುಕಟ್ಟೆಯಲ್ಲಿ ವಸ್ತುಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸುವುದು ಅತ್ಯವಶ್ಯವಾಗಿದೆ. ಸಾರ್ವಜನಿಕರು ಗ್ರಾಹಕರ ಹಕ್ಕುಗಳ ಮಾಹಿತಿ ಪಡೆಯುವುದು ಅತ್ಯಗತ್ಯವಾಗಿದೆ. ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಹೊಂದಿದರೆ ಮಾರುಕಟ್ಟೆಯಲ್ಲಿ ವಸ್ತುಗಳ ಖರೀದಿ, ಕಲಬೆರಿಕೆ ಬಗೆಗೆ ಎಚ್ಚರಹಿಸಲು ಸಾಧ್ಯ ಎಂದು ಹೇಳಿದರು.

       ಗ್ರಾಹಕರ ಹಿತರಕ್ಷಣಾ ಕಾಯ್ದೆ-1986 ಜಾರಿಗೆ ಬಂದಿದೆ. ಈ ಕಾಯ್ದೆಯಿಂದ "ಮಾರುವವನು ಎಚ್ಚರ" ಎಂದು ಧ್ಯೇಯದೊಂದಿಗೆ ಗ್ರಾಹಕರನ್ನು ರಕ್ಷಿಸಲು ಈ ಕಾಯ್ದೆ ಒಂದು ಅಮೂಲ್ಯವಾದ ಕವಚವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷೆ  ಸುನಂದಾ ದುರಗೇಶ ಅವರು ಮಾತನಾಡಿ, ಜಗತ್ತಿನಲ್ಲಿ ಹುಟ್ಟಿದ ಮಗುವಿನಿಂದ ಸಾಯುವ ವ್ಯಕ್ತಿಯವರಿಗೆ ಎಲ್ಲರೂ ಗ್ರಾಹಕರೇ. 

 ಸಮಾಜದಲ್ಲಿ ಒಬ್ಬರನ್ನೊಬ್ಬರು ಅಲಂಬಿಸಿರುವುದರಿಂದ ದಿನನಿತ್ಯದ ಜೀವನಕ್ಕೆ ಅವಶ್ಯವಾದ ವಸ್ತುಗಳನ್ನು ಖರೀದಿಸುವಾಗ ನಡೆಯುವ ಮೋಸ, ವಂಚನೆಗೆ ಒಳಗಾಗುವುದನ್ನು ತಡೆಯಲು ಜಾಗೃತರಾಗಬೇಕು. ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

   ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪ ನಿದರ್ೇಶಕ ವಿನೋದಕುಮಾರ ಹೆಗ್ಗಳಗಿ  ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ದೀಪಾ ಅತ್ತಿಗೇರಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದಶರ್ಿ ಜಿ. ಗೋವಿಂದ ಸ್ವಾಮಿ ಉಪಸ್ಥಿತರಿದ್ದರು. ವಕೀಲರಾದ ವಿ.ಎಫ್.ಕಟ್ಟೇಗೌಡರ್ ಉಪಾನ್ಯಾಸ ನೀಡಿದರು. ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಯೋಜನಾ ನಿದರ್ೇಶಕ ಎಸ್.ಹೆಚ್.ಮಜೀದ್ ಕಾರ್ಯಕ್ರಮ ನಿರೂಪಿಸಿದರು.