ಧಾರವಾಡ 15: ಮತಗಟ್ಟೆಯಲ್ಲಿ ಮತದಾನ ದಿನದಂದು ಚುನಾವಣಾ ನಿಯಮಗಳನ್ನು ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಚಾಚೂ ತಪ್ಪದೇ ಪಾಲಿಸಬೇಕು. ಯಾವುದೇ ರೀತಿಯ ಗೊಂದಲ, ಸಂಶಯ ಅಥವಾ ನಿಯಮ ಪಾಲನೆಯಲ್ಲಿ ಅಸ್ಪಷ್ಟತೆ ಇದ್ದರೆ ತರಬೇತಿ ಅವಧಿಯಲ್ಲಿ ಪರಿಹರಿಸಿಕೊಳ್ಳಬೇಕೆಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಅವರು ಇಂದು ಬೆಳಿಗ್ಗೆ ಜೆ.ಎಸ್.ಎಸ್. ಕಾಲೇಜು ಆವರಣದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಮತ್ತು ಸಹಾಯಕ ಅಧ್ಯಕ್ಷಾಧಿಕಾರಿಗಳಿಗೆ ಆಯೋಜಿಸಿರುವ ಎರಡನೇಯ ಹಂತದ ತರಬೇತಿ ಉದ್ದೇಶಿಸಿ ಮಾತನಾಡಿದರು.
ಶಾಂತಿಯುತವಾಗಿ ಸರಳವಾಗಿ ಮತ್ತು ವ್ಯವಸ್ಥಿತವಾಗಿ ಚುನಾವಣೆ ಜರುಗಿಸಲು ತರಬೇತಿ ಹೊಂದಿದ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಮತ್ತು ಸಹಾಯಕ ಅಧ್ಯಕ್ಷಾಧಿಕಾರಿಗಳ ಜವಾಬ್ದಾರಿ ಮುಖ್ಯವಾಗಿರುತ್ತದೆ.
ಮತದಾನ ದಿನದಂದು ನಿಗದಿತ ಸಮಯಕ್ಕೆ ಮತದಾನ ಆರಂಭಿಸಲು ಪೂರ್ಣ ಪ್ರಮಾಣದ ಸಿದ್ಧತೆ ಮಾಡಿಕೊಳ್ಳಬೇಕು. ಸಹನೆಯಿಂದ ವತರ್ಿಸಬೇಕು. ಯಾವುದೇ ರೀತಿಯ ಸಮಸ್ಯೆಗಳು ಕಂಡು ಬಂದರೆ ತಕ್ಷಣ ಮೇಲಾಧಿಕಾರಿಗಳನ್ನು ಸಂಪಕರ್ಿಸಿ, ಮಾರ್ಗದರ್ಶನ ಪಡೆಯಬೇಕು.
ತಮಗೆ ಗುರುತಿಸಿರುವ ಮತಗಟ್ಟೆಗಳಲ್ಲಿ ಸಾಕಷ್ಟು ಮುಂಚಿತವಾಗಿ ಉಪಸ್ಥಿತರಿದ್ದು, ಅಗತ್ಯ ಸಿದ್ಧತೆಗಳನ್ನು ಖಾತ್ರಿಪಡಿಸಿಕೊಳ್ಳಬೇಕು. ಮತಗಟ್ಟೆಗಳಲ್ಲಿ ಯಾವುದೇ ಗೊಂದಲಗಳಿಲ್ಲದೆ ಸುಸೂತ್ರವಾಗಿ ಮತದಾನ ಜರುಗುವಂತೆ ಎಲ್ಲರೂ ಆತ್ಮವಿಶ್ವಾಸ ಮತ್ತು ಪ್ರಜಾಪ್ರಭುತ್ವ ಬಲಪಡಿಸುವ ಹೆಮ್ಮೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಧಾರವಾಡ-71 ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಒಟ್ಟು 1116 ಜನ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಮತ್ತು ಸಹಾಯಕ ಅಧ್ಯಕ್ಷಾಧಿಕಾರಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು. 23 ಜನ ತರಬೇತಿದಾರರು ತರಬೇತಿ ನೀಡಿದರು.
ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ ಹಾಗೂ ತಹಶೀಲ್ದಾರ ಪ್ರಕಾಶ ಕುದರಿ ತರಬೇತಿ ಶಿಬಿರದ ಉಸ್ತುವಾರಿ ವಹಿಸಿದ್ದರು. ಧಾರವಾಡ ತಹಶೀಲ್ದಾರ ಕಚೇರಿ ಹಾಗೂ ಧಾರವಾಡ ತಾಲೂಕಿನ ಕಂದಾಯ ವಿಭಾಗದ ಅಧಿಕಾರಿಗಳು ಪಾಲ್ಗೊಂಡಿದ್ದರು.