ಬೆಂಗಳೂರು,ನ 26: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದೇ ಇದ್ದರೆ ನಿಮ್ಮ ನಾಯಕತ್ವದ ಸೋಲು ಎಂದು ಒಪ್ಪಿಕೊಳ್ಳಲು ಸಿದ್ದರಿದ್ದೀರಾ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರುಳೀಧರರಾವ್ ಸವಾಲೆಸೆದಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಈ ಉಪಚುನಾವಣೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವೈಫಲ್ಯದಿಂದಾಗಿ ಬಂದಿದೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರೇ ಉಪಚುನಾವಣೆ ಬರಲು ನೇರ ಕಾರಣ.ಬಿಜೆಪಿ ವಿಧಾನಸಭಾ ಚುನಾವಣೆಯ ಬಳಿಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು ಆದರೆ ಸರ್ಕಾರ ರಚಿಸಲು ಯಾವ ಪಕ್ಷಕ್ಕೂ ಪೂರ್ಣ ಬಹುಮತ ಹೊಂದಿರಲಿಲ್ಲ ವಿಧಾನಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಇತ್ತು .ಜೆಡಿಎಸ್ ಬಿಜೆಪಿಯ ಬಿ ಟೀಮ್ ಅಂತಾ ಕಾಂಗ್ರೆಸ್ ಪಕ್ಷವೇ ಹೇಳಿತ್ತು.ಫಲಿತಾಂಶ ಬಂದ 24 ಗಂಟೆಯೊಳಗೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡವು ಸರ್ಕಾರ ಪತನಕ್ಕೆ ಯಾರಾದರೂ ನೇರ ಕಾರಣ ಇದ್ದರೆ ಅದು ಸಿದ್ದರಾಮಯ್ಯ ಎಂದು ಆರೋಪಿಸಿದರು.
ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಿದ್ಧರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಈ ಚುನಾವಣೆಯಲ್ಲಿ ಜೆಡಿಎಸ್ ಗೆ ಮತ ಹಾಕುವುದರಿಂದ ಯಾವು ದೇ ಪ್ರಯೋಜನ ಇಲ್ಲ 15 ಸೀಟುಗಳನ್ನು ಗೆದ್ದರೂ ಜೆಡಿಎಸ್ ಸರ್ಕಾರ ಮಾಡಲು ಸಾಧ್ಯವಿಲ್ಲ ಕಾಂಗ್ರೆಸ್ ಗೆ ಮತವನ್ನು ಹಾಕಿದರೂ ಅವರು ಮಧ್ಯಂತರ ಚುನಾವಣೆಯ ಬಗ್ಗೆ ಮಾತಾಡುತ್ತಾರೆ ಕಾಂಗ್ರೆಸ್ ಗೆ ಮತ ಹಾಕಿದರೆ ಅದು ಮಧ್ಯಂತರ ಚುನಾವಣೆಗೆ ಅವಕಾಶ ಮಾಡಿಕೊಟ್ಟಂತೆ ಸ್ಥಿರ ಸರ್ಕಾರ ನೀಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಕರ್ನಾಟಕದಲ್ಲಿ ಯಾರಿಗೂ ಮಧ್ಯಂತರ ಚುನಾವಣೆ ಇಷ್ಟ ಇಲ್ಲ ಬಿಜೆಪಿ ಮಧ್ಯಂತರ ಚುನಾವಣೆ ಬಗ್ಗೆ ಒಲವು ಹೊಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ರಾಜೀನಾಮೆ ನೀಡಿದ ಬಳಿಕ ಅನರ್ಹ ಶಾಸಕರು ಹೊಸ ಆಲೋಚನೆಯೊಂದಿಗೆ ಬಿಜೆಪಿ ಸೇರಿದರು ಅವರನ್ನು ನಾವು ಒಪ್ಪಿಕೊಂಡಿ ದ್ದೇವೆ,ಅನರ್ಹರು ಬೇರೆ ಪಕ್ಷ ಸೇರಬಾದು ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿಲ್ಲ ಹಾಗಾಗಿ ಅವರನ್ನು ಅಭ್ಯರ್ಥಿಗಳನ್ನಾಗಿ ಮಾಡಿದ್ದೇವೆ ಎಂದು ಅನರ್ಹರಿಗೆ ಟಿಕೆಟ್ ನೀಡಿದ್ದನ್ನು ಮುರಳೀಧರ ರಾವ್ ಸಮರ್ಥಿಸಿಕೊಂಡರು.
ಸಿದ್ದರಾಮಯ್ಯ ಅವರು ಮತ್ತೊಮ್ಮ ಅಧಿಕಾರಕ್ಕೆ ಬರುವ ಕನಸಿನಲ್ಲಿದ್ದಾರೆ.ನಿಮ್ಮದು ಹಗಲುಗನಸು ಜೀವಮಾನವಿಡೀ ನೀವು ಕನಸು ಕಾಣು ತ್ತಲೇ ಇರಬೇಕು.ನೀವು ಮತ್ತೆ ಮುಖ್ಯಮಂತ್ರಿ ಆಗಲು ಸಾಧ್ಯ ಇಲ್ಲ ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟು ಇಲ್ಲ .ಕಾಂಗ್ರೆಸ್ ತಾನು ಕಳೆದುಕೊಂಡ 12 ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ ಸಿದ್ದರಾಮಯ್ಯನವರೇ ನೀವು ಉತ್ತರ ಹೇಳಲು ಸಿದ್ದರಿದ್ದೀರಾ? ನಿಮ್ಮ ನಾಯಕತ್ವದ ಸೋಲು ಎಂದು ಒಪ್ಪಿಕೊಳ್ಳುತ್ತೀರಾ, ನಮಗೆ ಅಗತ್ಯಕ್ಕಿಂತ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎನ್ನುವ ಸವಾಲನ್ನು ಸ್ವೀಕಾರ ಮಾಡಲು ಸಿದ್ದ ಇದೆ.ಬಿಜೆಪಿಗೆ 7 ಸ್ಥಾನಗಳು ಬಂದರೆ ಸಾಕು ನಾವು 15 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ ಎಂದರು.