ದುಬೈ 25: ಸಾಂಪ್ರಾದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದ್ದು ಈ ಗೆಲುವನ್ನು ಭಾರತೀಯರಷ್ಟೇ ಅಲ್ಲ, ಪಾಕ್ನವರು ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಸಂಭ್ರಮಿಸಿದ್ದಾರೆ.
ಏಷ್ಯಾಕಪ್ ಕ್ರಿಕೆಟ್ನ ಸೂಪರ್ 4 ಹಂತದಲ್ಲಿ ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ಕಳೆದ ಭಾನುವಾರ ಸೆಣೆಸಿದ್ದವು. ಈ ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ಗಳ ಭರ್ಜರಿ ಜಯ ಗಳಿಸಿತ್ತು. ಈ ಪಂದ್ಯದಲ್ಲಿ ಪಾಕ್ನ ಯುವತಿಯೊಬ್ಬಳು ತ್ರಿವರ್ಣ ಧ್ವಜವನ್ನು ಹಿಡಿದು ಸಂಭ್ರಮಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಆಗಿದೆ.
ಬುಖರ್ಾ ತೊಟ್ಟಿದ್ದ ಪಾಕ್ ಯುವತಿಯೊಬ್ಬಳು ರೋಹಿತ್ ಪಡೆಯ ಗೆಲುವನ್ನು ಕಂಡು ತ್ರಿವರ್ಣ ಧ್ವಜವನ್ನು ಹಿಡಿದು ಹಾರಿಸಿದ್ದಾರೆ. ಅಕ್ಕಪಕ್ಕದಲ್ಲಿ ಕುಳಿತ್ತಿದ್ದವರು ಆಕೆಯನ್ನೇ ದಿಟ್ಟಿಸಿ ನೋಡುತ್ತಿದ್ದರೂ ಕ್ಯಾರೇ ಅನ್ನದೇ ಯುವತಿ ತ್ರಿವರ್ಣ ಧ್ವಜವನ್ನು ಹರ್ಷದಿಂದ ಹಾರಿಸಿದ್ದಾಳೆ.