ವೈದ್ಯರು ವೃತ್ತಿ ಧರ್ಮ ಪಾಲನೆಯೊಂದಿಗೆ ಸೇವೆ ಸಲ್ಲಿಸಬೇಕು: ಡಾ. ಎಂ.ಎಂ. ಅನಂತರಡ್ಡಿ
Doctors must serve while upholding professional ethics: Dr. M.M. Ananthareddy
ರಾಣೆಬೆನ್ನೂರು 4: ವೈದ್ಯಕೀಯ ವೃತ್ತಿಗೆ ಭಾರತೀಯ ಸಂಸ್ಕೃತಿಯಲ್ಲಿ ಅತ್ಯುನ್ನತ ಗೌರವವಿದ್ದು, ಅನಾರೋಗ್ಯದಿಂದ ಬಳಲುವವರಿಗೆ ಸೂಕ್ತ ಚಿಕಿತ್ಸೆ ನೀಡಿ ಪುನರ್ಜೀವನ ನೀಡುವ ವೈದ್ಯರು ನಿಜವಾದ ದೇವರುಗಳೆಂದು ಹಿರಿಯ ವೈದ್ಯ ಡಾ. ಎಂ.ಎಂ. ಅನಂತರಡ್ಡಿ ಹೇಳಿದರು. ನಗರದ ಹೊರವಲಯದ ಹುಣಸಿಕಟ್ಟಿ ರಸ್ತೆಯ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರನ್ನು ಸನ್ಮಾನಿಸಿ ಅವರು ಮಾತನಾಡಿದರು.
ವೈದ್ಯರು ವೃತ್ತಿಯ ಪಾವಿತ್ರ್ಯ ಹಾಗೂ ಸೇವಾ ಮನೋಭಾವವನ್ನು ಕಾಪಾಡಿಕೊಳ್ಳಬೇಕು. ಇಂದಿನ ಯುವ ವೈದ್ಯರು ವೈದ್ಯಕೀಯ ವೃತ್ತಿಯ ಮೌಲ್ಯಗಳು ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಹಿರಿಯ ವೈದ್ಯ ಹಾಗೂ ಆಡಳಿತ ನಿರ್ದೇಶಕ ಡಾ. ಬಿ.ಆರ್. ಸಾವೂಕಾರ ಮಾತನಾಡಿ, ವೈದ್ಯರು ರೋಗಿಗಳ ಆರೋಗ್ಯ ಸಮಸ್ಯೆಯನ್ನು ಸೂಕ್ಷ್ಮವಾಗಿ ಪರೀಶೀಲಿಸಿ, ಸೂಕ್ತ ಚಿಕಿತ್ಸೆ ನೀಡುವುದರ ಜೊತೆಗೆ ಆರೋಗ್ಯದ ಕುರಿತು ಸಮರ್ಕ ಮಾಹಿತಿ ಮತ್ತು ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಶಾಲೆಯ ಹಳೆಯ ವಿದ್ಯಾರ್ಥಿನಿ ಆರಾಧನಾ ಚಿನ್ನಿಕಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಗುರಿ ಸಾಧನೆಗೆ ಏಕಾಗ್ರತೆ ಮತ್ತು ಶಿಸ್ತು ಬೆಳೆಸಿಕೊಳ್ಳಬೇಕು. ಮೊಬೈಲ್ ಬಳಕೆಗೆ ಅತಿಯಾದ ಆಸಕ್ತಿ ತೋರದೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರವನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ವಜ್ರೇಶ್ವರಿ ವಿ. ಲದ್ವಾ, ಕಾರ್ಯದರ್ಶಿ ತುಳಜಪ್ಪ ವಿ. ಲದ್ವಾ, ಪ್ರಾಚಾರ್ಯರು, ಶಿಕ್ಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 