ಒಂದೇ ದಿನ ದಾಖಲೆಯ 7.60 ಕೋಟಿ ರೂ. ವೆಚ್ಚದಲ್ಲಿ ಹತ್ತಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Dozens of development works launched at a record cost of Rs 7.60 crore in a single day
ಹಾನಗಲ್ 11 :ಸ್ಥಳೀಯ ಪುರಸಭೆಯ ಹಲವು ವಾರ್ಡ್ಗಳಲ್ಲಿ 2025-26 ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ ಒಟ್ಟು 7.60 ಕೋಟಿ ರೂ. ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ವಾರ್ಡ್ ನಂ 4, 5, 7, 8, 12, 13, 14, 18, 19 ಸೇರಿದಂತೆ ಹಲವೆಡೆ ಸಿಸಿ ರಸ್ತೆ, ಸಿಡಿ ನಿರ್ಮಾಣ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಈ ಸಂದರ್ಭದಲ್ಲಿ ಚಾಲನೆ ನೀಡಿದ ಶಾಸಕ ಮಾನೆ, ಹಾನಗಲ್ ಪುರಸಭೆ ವ್ಯಾಪ್ತಿಯಲ್ಲಿ ಒಂದೇ ದಿನ ದಾಖಲೆಯ 7.60 ಕೋಟಿ ರೂ. ವೆಚ್ಚದಲ್ಲಿ ಹತ್ತಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವುದು ಸಂತಸ ತಂದಿದೆ. ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸುಮಾರು 40 ಕೋಟಿ ರೂ.ಗಿಂತ ಹೆಚ್ಚು ಅನುದಾನ ದೊರಕಿಸಿ ಸಾರ್ವಜನಿಕರ ನೆಮ್ಮದಿಯ ಜೀವನಕ್ಕೆ ಮೂಲಸೌಕರ್ಯ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.
ಪುರಸಭೆ ಮಾಜಿ ಅಧ್ಯಕ್ಷರಾದ ಯಲ್ಲಪ್ಪ ಕಿತ್ತೂರ, ರಾಧಿಕಾ ದೇಶಪಾಂಡೆ, ಮಮತಾ ಆರೆಗೊಪ್ಪ, ಖುರ್ಷಿದ್ ಹುಲ್ಲತ್ತಿ, ಪರಶುರಾಮ ಖಂಡೂನವರ, ನಾಗಪ್ಪ ಸವದತ್ತಿ, ಮಾಜಿ ಉಪಾಧ್ಯಕ್ಷೆ ವೀಣಾ ಗುಡಿ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಆದರ್ಶ ಶೆಟ್ಟಿ, ಎಂ.ಎಂ.ಬಡಗಿ, ಮೋಹನ ಬಸವಂತಕರ, ಘನಶ್ಯಾಮ ದೇಶಪಾಂಡೆ, ರವಿ ದೇಶಪಾಂಡೆ, ರಾಜೂ ಗುಡಿ, ಗನಿ ಪಾಳಾ, ಇರ್ಫಾನ್ ಮಿಠಾಯಿಗಾರ, ಈರಣ್ಣ ಬೈಲವಾಳ, ಸಿಕಂದರ್ ವಾಲಿಕಾರ, ರಾಜಕುಮಾರ ಶಿರಪಂಥಿ, ಖಂಡೋಜಿ ಬೋಸ್ಲೆ, ಪುರಸಭೆ ಮುಖ್ಯಾಧಿಕಾರಿ ವೈ.ಕೆ.ಜಗದೀಶ, ಅಭಿಯಂತರ ನಾಗರಾಜ ಮಿರ್ಜಿ, ತಮ್ಮಣ್ಣ ಆರೆಗೊಪ್ಪ, ವಿನಯ ಬಂಕನಾಳ ಸೇರಿದಂತೆ ಇನ್ನೂ ಹಲವರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 