ಡಾ. ಅಂಬೇಡ್ಕರ್ ಅವರ ಕೊಡುಗೆಗಳು ಅಗಣಿತ: ಪ್ರೊ.ಶಾಂತಾದೇವಿ ಟಿ

Dr. Ambedkar's Contributions Countless: Prof. Shantadevi T

ಡಾ. ಅಂಬೇಡ್ಕರ್ ಅವರ ಕೊಡುಗೆಗಳು ಅಗಣಿತ: ಪ್ರೊ.ಶಾಂತಾದೇವಿ ಟಿ 

ವಿಜಯಪುರ 15: ಜಗತ್ತು ಕಂಡ ಮಹಾ ಮಾನವತಾವಾದಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಕೊಡುಗೆಗಳು ಅಗಣಿತವಾಗಿರುತ್ತವೆ. ಅಂಬೇಡ್ಕರ್ ಅವರು ಅನೇಕ ಕ್ಷೇತ್ರಗಳಲ್ಲಿ ವಿವಿಧ ಆಯಾಮಗಳಲ್ಲಿ ಕೊಡುಗೆಗಳನ್ನು ನೀಡಿದ್ದಾರೆ. ಪುಸ್ತಕ ಪ್ರೇಮಿ, ಜ್ಞಾನದ ಗಣಿಯಾಗಿದ್ದರು. ಮುಳ್ಳಿನ ಹಾಸಿಗೆಯಿಂದ ಜೀವನ ಶಿಕ್ಷಣವನ್ನು ಪಡೆಯಲು ಶ್ರಮಿಸಿ ವಿಶ್ವವೇ ಮೆಚ್ಚುವ ಜ್ಞಾನಿಯಾಗಿ ಹೊರಹೊಮ್ಮಿದವರು ಡಾ.ಬಿ.ಆರ್‌.ಅಂಬೇಡ್ಕರ್ ಅವರು. ಅವರ ಜೀವನ ಸಾಧನೆ ಕುರಿತು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ಸಲಹೆ ಮಾಡಿದರು. 

ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ.ಬಿ.ಆರ್‌.ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್‌.ಅಂಬೇಡ್ಕರ್ ಅವರ 134ನೆಯ ಜನ್ಮ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂವಿಧಾನದ ಅನುಷ್ಠಾನದ ಕುರಿತು ಪ್ರಾಥಮಿಕ ಶಾಲಾ ಮಕ್ಕಳಿಗೆ ತಿಳಿಸುವ ಪ್ರಯತ್ನವಾಗಬೇಕು ಎಂದು ಕರೆ ನೀಡಿದರು. 

ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನ ನಮ್ಮದು. ಈ ಸಂವಿಧಾನ ದೇಶದ ಅಭಿವೃಧ್ದಿಯ ಮೂಲ ಮಂತ್ರವಾಗಿದೆ. ಇಂಥ ಶ್ರೇಷ್ಠ ಸಂವಿಧಾನ ನೀಡಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆಲ್ಲಾ ಪ್ರಾತಃಸ್ಮರಣೀಯರು ಎಂದರು.  

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಾಧ್ಯಾಪಕರಾದ ಪ್ರೊ.ಪಿ.ಕಣ್ಣನ್, ಪ್ರೊ.ನಾರಾಯಣ ಪವಾರ ಮತ್ತು ಪ್ರೊ.ರಾಜಕುಮಾರ ಮಾಲಿಪಾಟೀಲ ಅವರು ಡಾ.ಬಿ.ಆರ್‌.ಅಂಬೇಡ್ಕರ ಅವರ ಜೀವನ ಮತ್ತು ಸಾಧನೆಗಳ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತು ್ತವಿದ್ಯಾರ್ಥಿನಿಯರು ಭಾಗವಹಿಸಿದ್ದರು. 

ಡಾ.ಬಿ.ಆರ್‌.ಅಂಬೇಡ್ಕರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾರ ಗಿರಿ ಕಾರ್ಯಕ್ರಮವನ್ನು ಸಂಘಟಿಸಿ ವಂದನಾರೆ​‍್ಣಯನ್ನು ಸಲ್ಲಿಸಿದರು. ಪ.ಜಾ/ಪ.ಪಂಗಳ ಘಟಕದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ನಿರೂಪಿಸಿದರು.