ಡಾ.ಅಂಬೇಡ್ಕರ್‌ರ ಆದರ್ಶಗಳು ನಮಗೆ ದಾರೀದೀಪವಾಗಿವೆ: ಬಸವರಾಜ ಪಣದಿ
Dr. Ambedkar's ideals are a beacon of light for us: Basavaraj Panadi
ಬೆಟಗೇರಿ 06: ಡಾ. ಬಿ.ಆರ್.ಅಂಬೇಡ್ಕರ್ ಅವರು ಕಾರ್ಮಿಕ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಹೋರಾಡಿದರು. ಅಂಬೇಡ್ಕರ ಅವರು ಸರಕಾರದ ಕಾರ್ಮಿಕ ನೀತಿಗೆ ಭದ್ರ ಬುನಾದಿ ಹಾಕಿದವರು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಡಿ.6ರಂದು ನಡೆದ ಡಾ. ಬಿ.ಆರ್.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿ, ಅಂಬೇಡ್ಕರ್ ಅವರ ಆದರ್ಶಗಳು ನಮಗೆ ದಾರೀದೀಪವಾಗಿವೆ ಎಂದರು.
ಬೆಟಗೇರಿ ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರ ಡಾ.ಬಿ.ಆರ್.ಅಂಬೇಡ್ಕರ ಅವರ ಬದುಕಿನ ಮತ್ತು ಮಹಾಪರಿನಿರ್ವಾಣ ದಿನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಾರೆ್ಪನ ಸಮರೆ್ನ ಕಾರ್ಯಕ್ರಮ ನಡೆಯಿತು.
ಸುರೇಶ ಬಾಣಸಿ, ಮಂಜುನಾಥ ಕಂಬಿ, ಮೆಳೆಪ್ಪ ಹರಿಜನ, ಅರ್ಜುನ ಬೆಟಗೇರಿ, ಶಿವಪ್ಪ ಐದುಡ್ಡಿ, ಈರ್ಪ ದಂಡಿನ ಸೇರಿದಂತೆ ಗ್ರಾಪಂ ಸದಸ್ಯರು, ಸಿಬ್ಬಂದಿ, ಡಾ.ಬಿ.ಆರ್.ಅಂಬೇಡ್ಕರ ಅಭಿಮಾನಿಗಳು, ಮತ್ತೀತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 