ನಾಳೆ ಡಾ.ಅನೀಲ ಕಾಕೋಡ್ಕರ್ ಅವರಿಗೆ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
Dr. Anil Kakodkar to be conferred with Bhaskar National Award tomorrow
ಸಿಂದಗಿ 22: ಚನ್ನವೀರ ಸ್ವಾಮೀಜಿ ಪ್ರತಿಷ್ಠಾನದಿಂದ ಕೊಡ ಮಾಡುವ ರಾಷ್ಟ್ರೀಯ ಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪದ್ಮವಿಭೂಷಣ ಭಾರತೀಯ ಪರಮಾಣು ವಿಜ್ಞಾನಿ ಡಾ.ಅನೀಲ ಕಾಕೋಡ್ಕರ್ ಅವರಿಗೆ ಡಿ.24ರಂದು ಸಾಯಂಕಾಲ 4ಗಂಟೆಗೆ ಸಾರಂಗಮಠದಲ್ಲಿ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ತಿಳಿಸಿದರು. ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಸಾನಿಧ್ಯವನ್ನು ಸಾರಂಗಮಠ-ಗಚ್ಚಿನಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಸಮ್ಮುಖವನ್ನು ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಅಧ್ಯಕ್ಷತೆಯನ್ನು ಸಿಂದಗಿ ಶಾಸಕ ಅಶೋಕ ಎಂ.ಮನಗೂಳಿ ವಹಿಸುವರು. ಮುಖ್ಯ ಅತಿಥಿಗಳಾಗಿ ಮೈಸೂರಿನ ಸಿಎಫ್‌ಟಿಆರ್‌ಐ ನಿವೃತ್ತ ಉಪನಿರ್ದೇಶಕ ಪರಮಹಂಸ ವಿ.ಸಾಲಿಮಠ ಇರಲಿದ್ದಾರೆ. ಅತಿಥಿಗಳಾಗಿ ಮಾಜಿ ಶಾಸಕ ರಮೇಶ ಭೂಸನೂರ, ಮಾಜಿ ವಿಪ ಶಾಸಕ ಅರುಣ ಶಹಾಪುರ ಭಾಗವಹಿಸಲಿದ್ದಾರೆ. ಈ ಪ್ರಶಸ್ತಿಯನ್ನು ಭಾರತದ ಟಾಪ್‌ಟೆನ್ ಅಂತರ್‌ರಾಷ್ಟ್ರೀಯ ಪೈನ್‌ಆರ್ಟ್ ಕಲಾವಿದ ಈರಣ್ಣ ಗೋಲಪ್ಪ ರುಕುಂಪುರ ಹಾಗೂ ಪತ್ನಿ ಪೂಜಾ ಪ್ರಶಸ್ತಿ ದಾನಿಗಳಾಗಿದ್ದಾರೆ ಎಂದು ಪ್ರತಿಷ್ಠಾನದ ಸಂಚಾಲಕರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 