ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಧನೆ ಪ್ರತಿನಿತ್ಯ ನಮಗೆ ಮಾರ್ಗದರ್ಶನ -ಜಿಲ್ಲಾಧಿಕಾರಿ ಸ್ನೇಹಲ್ ಆರ್
Dr. B.R. Ambedkar's achievement guides us daily - District Collector Snehal R
ಧಾರವಾಡ ಮಾ.5: ಡಾ.ಬಿ.ಆರ್.ಅಂಬೇಡ್ಕರ್ ಅವರು ಧಾರವಾಡದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಸಂವಿಧಾನ ರಚನೆ ಮಾಡಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ನಮಗೆ ಸಂದೇಶವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಧನೆ ಪ್ರತಿ ನಿತ್ಯ ನಮಗೆ ಮಾರ್ಗದರ್ಶನ ನೀಡುತ್ತಿವೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಅವರು ಇಂದು (ಮಾ.05) ಬೆಳಿಗ್ಗೆ ಧಾರವಾಡದ ಡಾ. ಬಿ.ಆರ್. ಅಂಬೇಡ್ಕರ ಪಾರಂಪರಿಕ ಕಟ್ಟಡ ಆವರಣದ ಜ್ಞಾನ ಬುದ್ಧವಿಹಾರ (ಬುದ್ಧ ರಕ್ಕಿಥ ಪ್ರೌಢಶಾಲೆ ಆವರಣ) ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಆಯೋಜಿಸಿದ್ದ ಭೀಮ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ಸಂವಿಧಾನ, ಕಾನೂನುಗಳು, ಮಹಿಳಾ ಚಿಂತನೆಗಳು, ಕಾರ್ಮಿಕ ಕಾನೂನುಗಳು ಸೇರಿದಂತೆ ಅನೇಕ ಕೆಲಸ ಕಾರ್ಯಗಳು ನಮ್ಮ ಜೀವನವನ್ನು ಸರಳೀಕರಣಗೊಳಿಸಿ, ಅರ್ಥಪೂರ್ಣವಾಗಿಸಿವೆ. ಈ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಇತಿಹಾಸದ ಒಂದು ಭಾಗವಾಗಿದ್ದಾರೆ. ಈ ಶಾಲೆಯ ಬಗ್ಗೆ ವಿದ್ಯಾರ್ಥಿಗಳು ಗೌರವವನ್ನು ಹೊಂದಿರಬೇಕು. ವಿದ್ಯಾರ್ಥಿಗಳು ಒಳ್ಳೆಯ ನಾಗರೀಕರಾಗಬೇಕು. ಇದು ವಸತಿ ಶಾಲೆ ಆಗಿರುವುದರಿಂದ ಒಂದು ಮೌಲ್ಯವನ್ನು ಹೊಂದಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಹೆಚ್ಚಿನ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಬೋಧಿಸಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರಂತೆ ಪ್ರತಿ ವರ್ಷ ಸುಮಾರು 500 ವಿದ್ಯಾರ್ಥಿಗಳು ಸಿದ್ಧರಾಗುತ್ತಿದ್ದಾರೆ. ಶಿಕ್ಷಕರು, ವಿಜ್ಞಾನಿಗಳು, ಇಂಜಿನಿಯರ್ ಸೇರಿದಂತೆ ಉತ್ತಮ ಪ್ರಜೆಗಳಾಗುವ ಮೂಲಕ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಲು ವಿದ್ಯಾರ್ಥಿಗಳು ಮುಂದಾಗಬೇಕಿದೆ. ಶಾಲೆ ಬೆಳವಣಿಗೆಗೆ ಸರ್ಕಾರ ಕೂಡ ಪ್ರಾಮುಖ್ಯತೆ ನೀಡಿದೆ. ಈ ಶಾಲೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಅವರು ಆಶಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟನ ಟ್ರಸ್ಟಿಗಳಾದ ಸಂತೋಷ ಜಕ್ಕಪ್ಪನವರ ಅವರು ಮಾತನಾಡಿ, ಬಾಂಬೆಯಲ್ಲಿ ಒಂದು ಹುಡುಗ ಪ್ರಾರಂಭಿಸಿದ ಹೋರಾಟದ ಪ್ರತಿಫಲವಾಗಿ ಶಾಲೆಯನ್ನು ಆರಂಭಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರು ಶಾಲೆ ಸ್ಥಾಪನೆಗೆ ಸಾಕಷ್ಟು ಶ್ರಮ ವಹಿಸಿದ್ದಾರೆ. ಮಾತೋಶ್ರೀ ರಮಾಬಾಯಿ ಅವರು ತಮ್ಮ ಆಭರಣಗಳನ್ನು ಮಾರಿ ವಿದ್ಯಾರ್ಥಿಗಳಿಗೆ ಊಟ ತಯಾರಿಸಿ ಊಣಬಡಿಸಿದರು. ಈ ಶಾಲೆಯಲ್ಲಿ ಭೀಮ ಗಾಯನ ಕಾರ್ಯಕ್ರಮ ನಡೆಯುತ್ತಿರುವ ಸಂತಸದ ವಿಷಯವಾಗಿದೆ ಎಂದು ಹೇಳಿದರು. ಬುದ್ಧ ರಕ್ಕಿಥ ವಸತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ ಕೆ.ಹಲಗಿ ಅವರು ಮಾತನಾಡಿ, ಶಾಲೆಯ ಆರಂಭಿಸುವ ಕುರಿತು ಡಾ.ಬಿ.ಆರ್.ಅಂಬೇಡ್ಕರ್ ಸಾಕಷ್ಟು ಪ್ರಯತ್ನಗಳನ್ನು ಮಾಡಿದರು. ಅಂಬೇಡ್ಕರ್ ಅವರು ಪ್ರಾರಂಭಿಸಿದ ಶಾಲೆ ಸಾಕಷ್ಟು ಬೆಳವಣಿಗೆ ಕಂಡಿದೆ ಎಂದು ಅವರು ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ (ಪ್ರ) ಡಾ. ಸುರೇಶ ಹಿರೇಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 2025-26 ನೇ ಸಾಲಿನ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ವಾರ್ತಾ ಇಲಾಖೆಯು ಭೀಮ ಗಾಯನ ಕಾರ್ಯಕ್ರಮವನ್ನು ಆಯೋಜಿಸಲು ಅನುಮತಿ ನೀಡಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕರ್ನಾಟಕದಲ್ಲಿ ಭೇಟಿ ನೀಡಿದ ಸುಮಾರು 10 ಜಿಲ್ಲೆಗಳಲ್ಲಿ ಭೀಮ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಅದರಂತೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಧಾರವಾಡಕ್ಕೆ ಭೇಟಿ ನೀಡಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ರಮಾಬಾಯಿ ಅವರು ಧಾರವಾಡದಲ್ಲಿ ವಸತಿ ಶಾಲೆ ಪ್ರಾರಂಭಿಸಲು ಶ್ರಮಿಸಿದರು. ಅವರೇ ಧಾರವಾಡದಲ್ಲಿ ಒಂದು ಸಹಕಾರ ಸಂಘ ಸ್ಥಾಪನೆ ಮಾಡಿದ್ದರು. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಂಸ್ಥೆ ಅವಿರತ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಗಣ್ಯರು ಬುದ್ಧ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಾರೆ್ಪಣ ಸಲ್ಲಿಸಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸಂವಿಧಾನ ಪೀಠಿಕೆ ಭೋದಿಸಿದರು. ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘದ ಕಲಾವಿದರು ಅಂಬೇಡ್ಕರ ಅವರ ವಿಚಾರಧಾರೆಗಳ ಕುರಿತು ಗಾಯನ ಕಾರ್ಯಕ್ರಮ ಪ್ರಸ್ತುತ ಪಡಿಸಿದರು. ಬುದ್ಧ ರಕ್ಕಿಥ ವಸತಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಬುದ್ಧ ವಂದನೆ ಸಲ್ಲಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ.ಆರ್.ಸದಲಗಿ ಸ್ವಾಗತಿಸಿದರು. ನಾಗಪ್ಪ ಕೆ. ಮಾದರ ವಂದಿಸಿದರು. ಬಸವರಾಜ ಚಿಕ್ಕೂರ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎಂ.ಬಿ.ಸಣ್ಣೇರಿ, ಮುದುಕೇಶ ಮಾದರ, ಅರ್ಜುನ ಕಟ್ಟಿಮನಿ, ಮಮತಾ, ವಿಕ್ರಮ ಹೊಸಮನಿ, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಇತರರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 