ಡಾ ಬಿ.ವಿ.ಶಿರೂರ , ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ, ಗೌರವ
Dr. B.V. Shirur, Trustee of Horakeri Master Education Foundation, presented with a plaque of apprec
ಹುಬ್ಬಳ್ಳಿ 46: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶ್ರೇಷ್ಠ ಸಂಶೋಧಕ ಡಾ. ಎಂ.ಎಂ.ಕಲಬುರ್ಗಿ ಅವರ 87ನೇ ಜನ್ಮದಿನದ ಅಂಗವಾಗಿ ಡಾ. ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಟಾನದವರು ಆಲೂರು ವೆಂಕಟರಾವ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಬಸವ ಕೇಂದ್ರದ ಹಿಂದಿನ ಅಧ್ಯಕ್ಷರು, ಸಾಹಿತಿ, ಕರ್ನಾಟಕ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಪೀಠದಲ್ಲಿ ಜೈನ ಸಾಹಿತ್ಯ ಪ್ರವಾಚಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ, 85ರ ಹಿರಿಯರಾದ ಡಾ ಬಿ.ವಿ.ಶಿರೂರ ಅವರುಡಾ. ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಸಂಶೋಧನ ಪ್ರಶಸ್ತಿ ಪುರಸ್ಕೃತರಾಗಿ ಸನ್ಮಾನಗೊಂಡ ಶುಭ ಸಂದರ್ಭದಲ್ಲಿ ಕನ್ನಡದ ಶ್ರೇಷ್ಠ ಪ್ರಾಧ್ಯಾಪಕರು. ಪಾಂಡಿತ್ಯ ಪರಂಪರೆಯ ಬಹುಶಿಸ್ತೀಯ ಅಧ್ಯಯನದ ಘನ ವಿದ್ವಾಂಸರು, ಚಿಂತನಶೀಲ ಬದ್ಧತೆಯ ಬರಹಗಾರರು.
ಹಳಗನ್ನಡ, ಶಾಸನ, ಇತಿಹಾಸ, ಸಂಸ್ಕೃತಿ, ವಚನಸಾಹಿತ್ಯ, ಹಸ್ತಪ್ರತಿ, ಗ್ರಂಥ ಸಂಪಾದನಶಾಸ್ತ್ರ ಪರಿಣತರುಡಾ. ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಸಂಶೋಧನ ಪ್ರಶಸ್ತಿ ಪುರಸ್ಕೃತರಾದ ಡಾ ಬಿ.ವಿ.ಶಿರೂರ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ, ಗೌರವ ಪೂರ್ವಕವಾಗಿ ಶ್ರದ್ಧಾ ಭಕ್ತಿಯಿಂದ ನಮನಗಳನ್ನು ಸಲ್ಲಿಸಲಾಯಿತು. ಭಕ್ತಿಯಿಂದ ಶುಭಾಶಯಗಳನ್ನು ಕೋರಿದರು. ಡಾ. ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಟಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ ಪ್ರಾಧ್ಯಾಪಕರು, ರಸಾಯನಶಾಸ್ತ್ರ ವಿಷಯದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ, ಖ್ಯಾತ ರಸಾಯನಶಾಸ್ತ್ರ ವಿಜ್ಞಾನಿ, ಪ್ರಾಧ್ಯಾಪಕ ಡಾ. ಶರಣಪ್ಪ ಟಿ. ನಂದಿಬೇವೂರ, ಅರುಣಾ ಶರಣಪ್ಪ ನಂದಿಬೇವೂರ,ಖ್ಯಾತ ಮಕ್ಕಳ ಸಾಹಿತಿ ನಿಂಗಣ್ಣ ಕುಂಟಿ, ಡಾ. ಸಣ್ಣವೀರಣ್ಣ ದೊಡ್ಡಮನಿ, ಡಾ. ಧನವಂತ ಹಾಜವಗೋಳ, ಮಹಾಂತಪ್ಪ ನಂದೂರ, ಬಿ.ಎಸ್.ಶಿರೋಳ, ಬಸವಂತಪ್ಪ ತೋಟದ, ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 