ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿ ನಿರ್ವಾಣ
ಗದಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರೆ್ಣಗದಗ 07 : ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಗದಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ನಗರಸಭೆಯ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಶನಿವಾರ ಮಾಲಾರೆ್ಣ ಮಾಡಲಾಯಿತು.ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷರು, ಗದಗ ವಿಧಾನಸಭಾ ಮತಕ್ಷೇತ್ರದ ಮಾಜಿ ಶಾಸಕ ಡಿ.ಆರ್. ಪಾಟೀಲ ಮಾಲಾರೆ್ಣ ಮಾಡಿದರು.
ಗದಗ ಜಿಲ್ಲಾ ಪರಿಶಿಷ್ಟ ಜಾತಿ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ಬಸವರಾಜ ಕಡೆಮನಿ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಮಾರ್ತಾಂಡಪ್ಪ ಹಾದಿಮನಿ, ವಿನಾಯಕ ಬಳ್ಳಾರಿ, ವಿದ್ಯಾಧರ ದೊಡ್ಡಮನಿ, ಶಂಭು ಕಾಳೆ, ಶಿವು ಬಳ್ಳಾರಿ, ಉಮರ್‌ಫಾರೂಖ್ ಹುಬ್ಬಳ್ಳಿ, ಅನ್ವರ ಶಿರಹಟ್ಟಿ, ಮಹಮ್ಮದ್ ಶಾಲಗಾರ, ಶ್ರೀಕಾಂತ ಮಳಲಿ, ಎಚ್.ಕೆ. ಅಕ್ಕಿ, ಕೆ.ಎಚ್. ಬೆಲೂರ, ಬಾಲರಾಜ ಅರಬರ, ಶಾರುಖ್ ಹುಯಿಲಗೋಳ, ಅನಿಲ ಗರಗ, ಶಂಭು ಹುನಗುಂದ, ಮಹಮ್ಮದಸಾಬ್ ಬೆಟಗೇರಿ, ರಮೇಶ ರೋಣದ ಹಾಗೂ ಸೇರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.