ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರ - ಹಿರಿಯ ನ್ಯಾಯವಾದಿ ಚಂದ್ರಶೇಖರ ನೇಗಿನಹಾಳ
Dr. Babasaheb Ambedkar's contribution is immense - Senior Advocate Chandrashekar Neginahala
ಧಾರವಾಡ 28: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ 77 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಹಿರಿಯ ನ್ಯಾಯವಾದಿ ಚಂದ್ರಶೇಖರ ನೇಗಿನಹಾಳ ಮಾತನಾಡುತ್ತಾ ಸಂವಿಧಾನ ರಚನೆಯ ಸಂದರ್ಭದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರ ಎಂದರು. ಭಾರತದ ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯ, ರಾಜಕೀಯ ಸ್ವಾತಂತ್ರ್ಯ, ಸಾಮಾಜಿಕ ಸ್ವಾತಂತ್ರ್ಯವನ್ನು ನೀಡಿದ್ದು, ಸಂವಿಧಾನ ಅಡಿಯಲ್ಲಿ ಎಲ್ಲರೂ ಸಮಾನರು ಎಂದು ತಿಳಿಸಿದರು. ಮತ್ತೋರ್ವ ಹಿರಿಯ ನ್ಯಾಯವಾದಿ ಶರಣು ಅಂಗಡಿ ಸಂವಿಧಾನ ಆಶೆಗಳನ್ನು ಈಡೇರಿಸಲು ನಾವು ಪ್ರಮುಖ ಪಾತ್ರ ವಹಿಸಬೇಕು ಎಂದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್ ಎಸ್ ಅಂಗಡಿ, ಉತ್ತರ ಕನ್ನಡ ಜಿಲ್ಲಾ ಕಸಾಪ ಪದಾಧಿಕಾರಿಗಳಾದ ವೆಂಕಟೇಶ್ ನಾಯಕ್, ಗುರು ತಿಗಡಿ, ಹೆಚ್ ಎಸ್. ಬಡಿಗೇರ, ಬಿ.ಜಿ. ಬಾರ್ಕಿ, ಸರಸ್ವತಿ ರಾವ್ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಡಾ . ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರೊ . ಸಬ್ಬೀರ ತಟಗಾರ ದೇಶ ಭಕ್ತಿ ಗೀತೆ ಪ್ರಸ್ತುತಪಡಿಸಿದರು. ಪ್ರಮಿಳಾ ಜಕ್ಕನ್ನವರ ಪ್ರಾರ್ಥಿಸಿದರು. ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹಾಂತೇಶ ನರೇಗಲ್ ಸ್ವಾಗತಿಸಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿರಸಿ ಎನ್‌ಜಿಒ ಸದಸ್ಯರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು, ಜಿಲ್ಲಾ ಹಾಗೂ ತಾಲೂಕು ಕಸಾಪ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 