ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಅರ್ಥಪೂರ್ಣ ಜಯಂತಿ ಆಚರಣೆಗೆ ನಿರ್ಧಾರ
ವಿಜಯಪುರ 24: ತಿಕೋಟಾ ತಾಲೂಕ ಆಡಳಿತದ ವತಿಯಿಂದ ಏಪ್ರಿಲ್ 5ರಂದು ಡಾ. ಬಾಬು ಜಗಜೀವನರಾಂ ಹಾಗೂ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತ್ಯೋತ್ಸವ ಕಾರ್ಯಕ್ರಮಗಳನ್ನು ಅಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು. ತಿಕೋಟಾ ತಾಲೂಕಿನ ತಹಶೀಲ್ದಾರರಾದ ಸುರೇಶ ಚಾವಲರ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 24 ರಂದು ತಹಶೀಲ್ದಾರ ಅವರ ಕಾರ್ಯಾಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಈ ಮಹನೀಯರ ಜಯಂತಿ ಕಾರ್ಯಕ್ರಮಗಳಿಗೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿ,ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಕೋರಿದ್ದಾರೆ. ಸಭೆಯಲ್ಲಿ ತಾಲೂಕಾ ಪಂಚಾಯತಿಯ ಕಾರ್ಯನಿರ್ವಾಹಣಾಧಿಕಾರಿಗಳಾದ ಬಿ.ಆರ್ ಬಿರಾದಾರ, ಪಟ್ಟಣ ಪಂಚಾಯಿತಿಯ ಅಧಿಕಾರಿಗಳಾದ ರಘು ನಡುವಿನಮನಿ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಜೆ ಇಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.