ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಡಾ.ಭೀಮಾಶಂಕರ ಕನ್ನೂರ
Dr. Bhimashankar Kannur visited the boys' hostel
ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಡಾ.ಭೀಮಾಶಂಕರ ಕನ್ನೂರ
ಇಂಡಿ 16: ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಭೀಮಾಶಂಕರ ಕನ್ನೂರ ಭೇಟಿ ನೀಡಿ ಮಕ್ಕಳ ಸಮಸ್ಯೆಗಳನ್ನು ಆಲಿಸಿದರು.
ಅಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರ ಸಾಮಗ್ರಿಗಳ ಗುಣಮಟ್ಟ ಮತ್ತು ಅಡುಗೆ ಕೋಣೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸ್ಥಿತಿ-ಗತಿ , ವಸತಿ ನಿಲಯದ ಒಳಾಂಗಣ ಮತ್ತು ಹೊರಾಂಗಣ ಸ್ವಚ್ಛತೆ, ಶೌಚಾಲಯಗಳ ಸ್ವಚ್ಛತೆ, ಹಾಗೂ ಆಟೋಪಕರಣಗಳ ಬಳಕೆ ಮತ್ತು ಕಾರ್ಯಚಟುವಟಿಕೆಗಳನ್ನು ಪರೀಶೀಲಿಸಿದರು. ವಸತಿ ನಿಲಯದ ಅಡುಗೆ ಕೋಣೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಹಾಗೂ ದಿನನಿತ್ಯ ಅಡುಗೆಗೆ ಬಳಸುವ ದವಸ ಧಾನ್ಯಗಳನ್ನು ಹಾಗೂ ತರಕಾರಿಗಳನ್ನು ಪರೀಶೀಲಿಸಿ ತದನಂತರ ಅಡುಗೆ ಕಾರ್ಯ ಮುಂದುವರೆಸಬೇಕು. ವಸತಿ ನಿಲಯದಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಇಲ್ಲದ ಕಂಡು ವಸತಿ ನಿಲಯ ನಿಲಯಪಾಲಕನಿಗೆ ತರಾಟೆಗೆ ತೆಗೆದುಕೊಂಡು ವಸತಿ ನಿಲಯದಲ್ಲಿ ಖಡ್ಡಾಯವಾಗಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಇಡುವಂತೆ ಹಾಗೂ ವಿದ್ಯಾರ್ಥಿಗಳಿಗೆ ಅನಾರೋಗ್ಯ ಸ್ಥಿತಿಯಲ್ಲಿ ಇದ್ದರೇ ವಿದ್ಯಾರ್ಥಿಗಳನ್ನು ಹಾಸ್ಪಿಟಲ್‌ಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಮಾಡಿಸುವ ಸಂಪೂರ್ಣ ಜವಾಬ್ದಾರಿ ನಿಮದು ಆಗಿರುತ್ತದೆ. ಅಥವಾ ಅಂಬುಲೆನ್ಸ್ ಗೆ ಕರೆ ಮಾಡಿ ಚಿಕಿತ್ಸೆ ಪಡೆಸುವ ಕಾರ್ಯ ಮಾಡಬೇಕು ಎಂದು ಕಟ್ಟು ನಿಟ್ಟಾಗಿ ಸೂಚಿಸಿದರು. ವಸತಿ ನಿಲಯದ ಮುಂಭಾಗದಲ್ಲಿ ವಿದ್ಯುತ್ಯ ಬಲ್ಪ ಅಳವಡಿಸಲು ಹಾಗೂ ವಸತಿ ನಿಲಯಕ್ಕೆ ಇಂಟರ್ನೆಟ್ ಸೌಲ್ಯಭ್ಯ ಇದ್ದು ಅದನ್ನು ಒಃಕಖ ಹೆಚ್ಚಿಸಲು ಸೂಚಿಸಿದರು. ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸರ್ಕಾರದ ನಿಯಮಗಳಂತೆ ಸಕಲ ಸೌಕರ್ಯ ಒದಗಿಸಿ ಅವರ ಬಾಳಿಗೆ ದಾರೀದೀಪವಾಗುವ ಉತ್ತಮ ನಿಲಯ ಪಾಲಕನಾಗಬೇಕೆಂದು ತಿಳಿಸಿದರು.
ವಸತಿ ನಿಲಯದಲ್ಲಿ ನೂತನ ಗ್ರಂಥಾಲಯ ಕಟ್ಟಡವಿದ್ದು ಅದಕ್ಕೆ ವ್ಯವಸ್ಥಿತ ವಿದ್ಯುತ್ ಸಂಪರ್ಕ ಕಲ್ಪಿಸಿ ಸಪ್ಟಂಬರ್ 27- 2025 ರಂದು ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಎಸ್ ಆರ್ ಗದ್ಯಾಳ ರವರಿಗೆ ನಿರ್ದೇಶನ ನೀಡಿದರು.
ಈ ಸಮಯದಲ್ಲಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು, ವಸತಿ ನಿಲಯ ಪಾಲಕರು ಹಾಗೂ ಸಿಬ್ಬಂದಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 