ಡಾ. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಣೆ

ಲೋಕದರ್ಶನ ವರದಿ

ವಿಜಯಪುರ 14: ಕನರ್ಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೆಯ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಅವರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಲಸಚಿವೆ ಪ್ರೊ.ಆರ್.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಪ್ರೊ.ಪಿ.ಜಿ.ತಡಸದ, ಪಿಎಂಇಬಿ ನಿದರ್ೇಶಕ ಪ್ರೊ.ಎಸ್.ಎ.ಖಾಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿದರ್ೇಶಕ ಪ್ರೊ.ಡಿ.ಎಂ.ಜ್ಯೋತಿ ಉಪಸ್ಥಿತರಿದ್ದರು.