ವಚನ ಸಾಹಿತ್ಯ ಸಂರಕ್ಷಣೆಗೆ ಡಾ. ಫ. ಗ. ಹಲಕಟ್ಟಿ ಅವರ ಅಪಾರ ಕೊಡುಗೆ: ಗಣ್ಯರಿಂದ ಗೌರವ ನಮನ
Dr. F.G. Halakatti's Immense Contribution to Preserving Vachana Literature: Tributes from Dignitari
ಧಾರವಾಡ 02: ಕನ್ನಡ ನಾಡಿನ ಹೆಮ್ಮೆಯ ಪುತ್ರ ಹಾಗೂ ವಚನ ಸಾಹಿತ್ಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಡಾ. ಫ. ಗ. ಹಲಕಟ್ಟಿ ಅವರ ಜನ್ಮದಿನಾಚರಣೆಯನ್ನು ನಗರದ ಡಾ. ಆರ್. ಎಂ. ಎಂ. ವಿಶ್ವವಿದ್ಯಾಲಯದ ವಚನ ಪಿತಾಮಹ ಸಭಾಭವನದಲ್ಲಿ ಭಕ್ತಿ ಹಾಗೂ ಗೌರವದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹಲಕಟ್ಟಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಘವೇಂದ್ರ ರಾಜೂರು ಅವರು, ಹಲಕಟ್ಟಿ ಅವರು ತಮ್ಮ ಬದುಕನ್ನೇ ವಚನ ಸಾಹಿತ್ಯ ಸಂರಕ್ಷಣೆಗೆ ಅರ್ಿಸಿ, ಸಾವಿರಾರು ವಚನಗಳನ್ನು ಸಂಗ್ರಹಿಸಿ ಪ್ರಕಟಿಸುವ ಮೂಲಕ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ಅವರ ನಿಸ್ವಾರ್ಥ ಸೇವೆ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ವಚನ ಪಿತಾಮಹ ಹಲಕಟ್ಟಿ ಅವರು ಕನ್ನಡ ಪರ ಹೋರಾಟದಲ್ಲಿಯೂ ಸಕ್ರಿಯರಾಗಿದ್ದು, ಹಳೆಯ ಹಸ್ತಪ್ರತಿಗಳಲ್ಲಿದ್ದ ವಚನಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸುವ ಮೂಲಕ ಮಹತ್ವದ ಕಾರ್ಯ ಮಾಡಿದ್ದಾರೆ ಎಂದು ಗಣ್ಯರು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ವೀರಣ್ಣ ರಾಜೂರು ಅವರು, ಹಲಕಟ್ಟಿ ಅವರ ಪರಿಶ್ರಮದಿಂದ ಅನೇಕ ಶರಣರ ವಚನಗಳು ಇಂದು ನಮ್ಮ ಕೈ ಸೇರಿವೆ. ವಚನ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅವರ ಪಾತ್ರ ಅಪಾರವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಚನ್ನಮ್ಮನ ಕಿತ್ತೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಡಾ. ಉಮಾ ಬಾಗಲಕೋಟ ಅವರು ಹಲಕಟ್ಟಿ ಅವರ ಜೀವನ ಹಾಗೂ ಸಮಾಜ ಸೇವೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು, ಶಿಕ್ಷಕರು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 