ಬಡ ಮಕ್ಕಳಿಗೆ ಶಿಕ್ಷಣ ಕಲಿಯಲು ಧ.ಗ್ರಾಮಾಭಿವೃದ್ಧಿ ಯೋಜನೆ ಸಹಾಯ: ರಾಜು ನಾಯ್ಕ
Dr. Gramabhivriddhi Yojana help poor children to learn education: Raju Nayka
ಬಡ ಮಕ್ಕಳಿಗೆ ಶಿಕ್ಷಣ ಕಲಿಯಲು ಧ.ಗ್ರಾಮಾಭಿವೃದ್ಧಿ ಯೋಜನೆ ಸಹಾಯ: ರಾಜು ನಾಯ್ಕ
ಗುರ್ಲಾಪೂರ 12: ಸಮೀಪದ ಹಳ್ಳೂರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಬಡ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗಡೆಯವರು ಸಮಾಜದ ಉದ್ಧಾರದ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು ಹಣದ ರೂಪದಲ್ಲಿ ಸಹಾಯ ಸಹಕಾರ ಮಾಡುತ್ತಿದ್ದಾರೆ ಎಂದು ತಾಲೂಕಾ ಯೋಜನಾಧಿಕಾರಿ ರಾಜು ನಾಯ್ಕ ಹೇಳಿದರು.
ಅವರು ಗ್ರಾಮದ ಸೌಭಾಗ್ಯವತಿ ಸುಮಿತ್ರಾ ದೇವಿ ಪಾಟೀಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ 2 ಎರಡು ಲಕ್ಷ ರೂಪಾಯಿ ಸಹಾಯಧನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಾಲಾ ಕಟ್ಟಡ, ಕಂಪೌಂಡ, ನಿರ್ಮಾಣ, ಶಿಕ್ಷಕರಿಗೆ ಸಹಾಯ ದನ, ಟ್ಯೂಷಣ ಕಲಿಕೆಗೆ, ಪ್ರೋತ್ಸಾಹ ಧನ, ಪರಿಸರ ಸಂರಕ್ಷಣೆ ಸ್ವಾಸ್ತ್ಯ ಕಾರ್ಯಕ್ರಮ,ವಿದ್ಯಾರ್ಥಿಗಳು ದುಷ್ಟ ಚಟಗಳಿಗೆ ಬಲಿಯಾಗಬಾರದೆಂದು ಜಾಗೃತಿ ಅಭಿಯಾನ, ಆಟದ ಮೈದಾನ ಶೌಚಾಲಯ ನಿರ್ಮಾಣ ,ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ,ದೇವಸ್ಥಾನ ಜೀರ್ಣೋದ್ಧಾರಕ್ಕೆ ಅನೇಕ ಬಗೆಯ ಸೌಲಭ್ಯಗಳು ಸಿಗುತ್ತವೆ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಅಧ್ಯಕ್ಷರಾದ ಮಾರುತಿ ದಾಸರ ಮಾತನಾಡಿ ದೇವಸ್ಥಾನಗಳಿಗೆ ಹೋಗಿ ನಾವು ಹಣದ ರೂಪದಲ್ಲಿ ಕಾಣಿಕೆ ನೀಡುತ್ತೇವೆ ಆದರೆ ನಮ್ಮ ಶಾಲೆಯ ಕಟ್ಟಡ ಕಾಮಗಾರಿಗೆ ಪುಣ್ಯಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಣ ಕೊಟ್ಟಿದ್ದಕ್ಕೆ ನಮ್ಮ ಸೌಭಾಗ್ಯ ಎಂದು ಹೇಳಿದರು.
ಮುರಿಗೆಪ್ಪ ಮಾಲಗಾರ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬಡ ಕುಟುಂಬ ಶಾಲಾ ಕಾಲೇಜು ಕಟ್ಟಡ ಕಾಮಗಾರಿಗೆ ಹಣದ ರೂಪದಲ್ಲಿ ಸಹಾಯ ಮಾಡುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ. ಆಡು ಮುಟ್ಟದ ಸೊಪ್ಪಿಲ್ಲ ಧರ್ಮಸ್ಥಳ ಸಂಸ್ಥೆ ಸಹಾಯ ಮಾಡುವ ಪುಣ್ಯದ ಕೆಲಸ ಉಳಿದಿಲ್ಲ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಸಂತಾಪ ಸೂಚಿಸಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.
ಭೀಮನಗೌಡ ಪಾಟೀ ಪ್ರಧಾನ ಗುರು ಜಿ ಜಿ ಇಡನ್ನವರ, ಮೇಲ್ವಿಚಾರಕಿ ರೇಣುಕಾ ತಿಳುವಳಿ, ಒಕ್ಕೂಟ ಅಧ್ಯಕ್ಷೆ ಕೌಸರ ಹನಗಂಡಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಎಂ ಡಿ ಕಂಬಾರ, ಪಿ ಎಂ ಶಿವಾಪುರ, ಎ ಎಂ ಹೆಗ್ಗಾಣಿ, ಎಂ ಎಂ ನೇಸುರ, ಜಯಶ್ರೀ ಹೊಸಟ್ಟಿ, ಎಂ ಆರ್ ಬಂಡಿ, ಎಂ ಬಿ ಹುಕ್ಕೇರಿ, ಆರ್ ಎಲ್ ಹರಿಜನ, ಕೆ ಕೆ ಗುಳೇದ, ಎಂ ಡಿ ಮೇತ್ರಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳಿದ್ದರು.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 