ಡಾ. ಜೆ ಪಿ ಅವರಿಗೆ ಇಂದು ಪ್ರಶಸ್ತಿ ಪ್ರದಾನ
Dr. J. P. presented with award today
ಬೆಳಗಾವಿ: ನಿವೃತ್ತ ಪ್ರಾಂಶುಪಾಲರಾದ ಡಾ. ಜೆ ಪಿ ದೊಡಮನಿ ಅವರು ಅನುವಾದ ಕ್ಷೇತ್ರದಲ್ಲಿ ಸದ್ದು ಗದ್ದಲವಿಲ್ಲದೆ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಅಕ್ಷರ ಕ್ರಾಂತಿ , ಸಾಮಾಜಿಕ ಕ್ರಾಂತಿ ಮಾಡಿದ ಅನೇಕ ಮಹಾತ್ಮರ ಜೀವನ ಚರಿತ್ರೆಯನ್ನು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿ, ನಾಡಿನಾದ್ಯಂತ ಅಪಾರ ಸಹೃದಯಿ ಓದುಗರ ಅಭಿಮಾನಿ ಬಳಗವನ್ನು ಹೊಂದಿರುವರು.ಇವರ ಅನುವಾದ ಕೃತಿಗಳಿಗೆ ರಾಜ್ಯ ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಒಲಿದು ಬಂದು ಅವರ ಗೌರವವನ್ನು ಹೆಚ್ಚಿಸಿವೆ. ಅವರ ಅನುವಾದ ಕೃತಿಗಳಲ್ಲಿ ಒಂದಾದ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಜೀವನ ಚರಿತ್ರೆ ಕೃತಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023 ನೇ ವರ್ಷದ ಶ್ರೇಷ್ಠ ಅನುವಾದಿತ ಕೃತಿ ಎಂದು ಆಯ್ಕೆ ಮಾಡಿದೆ.
ಇಂದು ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ ಗುಬ್ಬಿ ಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರಶಸ್ತಿಯು ಇಪ್ಪತೈದು ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಅವರ ಈ ಪರಿಶ್ರಮ, ಸಾಧನೆಗೆ ಕುಟುಂಬದವರು ಹಾಗೂ ಅನೇಕ ಸಂಘ ಸಂಸ್ಥೆಗಳು, ಅಭಿಮಾನಿ ಬಳಗ ಅಭಿನಂದಿಸಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 