ಹುಬ್ಬಳ್ಳಿ ಸೆಂಟರ್ನ ಎರಡು ವರ್ಷ ಅವಧಿಗೆ ಆಡಳಿತ ಮಂಡಳಿ ಸದಸ್ಯರಾಗಿ ಆಯ್ಕೆಯಾದ ಡಾ. ಎಂ.ಆರ್.ಪಾಟೀಲ
Dr. M.R. Patil elected as a member of the Board of Directors of the Hubballi Center for a two-year
ಹುಬ್ಬಳ್ಳಿ 12: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದ ಸಿವಿಲ್ ವಿಭಾಗದ ಮುಖ್ಯಸ್ಥ ಡಾ. ಎಂ.ಆರ್.ಪಾಟೀಲ ಅವರು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ ಸಿವಿಲ್ ಇಂಜಿನಿಯರಿಂಗ್ (ಇಂಡಿಯಾ) ಹುಬ್ಬಳ್ಳಿ ಸೆಂಟರ್ನ ಎರಡು ವರ್ಷ ಅವಧಿಗೆ ಆಡಳಿತ ಮಂಡಳಿ ಸದಸ್ಯರಾಗಿ ಆಯ್ಕೆಯಾದ ನಿಮಿತ್ ಡಾ. ಎಂ.ಆರ್.ಪಾಟೀಲ ಅವರಿಗೆ ನಿವೃತ್ತ ಪ್ರಾಚಾರ್ಯ ಡಾ ಲಿಂಗರಾಜ ಡಿ ಹೊರಕೇರಿ ಪುಷ್ಪಗುಚ್ಛ ನೀಡಿ ಹುತ್ಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಶಿಕ್ಷಣ, ಸಾಮಾಜಿಕ, ಧಾರ್ಮಿಕ, ಮುಂತಾದ ಕ್ಷೇತ್ರಗಳಲ್ಲಿ ಅವರ ಜನಕಲ್ಯಾಣ ಸೇವಾ ಕಾರ್ಯಗಳು ನಿರಂತರವಾಗಿ ಮುಂದುವರೆಯಲಿ ಎಂದು ಶುಭ ಕೋರಿದರು.
ಡಾ. ಎಚ್.ವಿ.ಬೆಳಗಲಿ, ಗುರುರಾಜ ಹೂಗಾರ, ಬಾಬುಗೌಡ ಬಂಟನೂರಗೌಡ್ರ, ಮುಂತಾದವರು ಉಪಸ್ಥಿತರಿದ್ದರು. ಡಾ. ಎಂ.ಆರ್.ಪಾಟೀಲ ಅವರಿಗೆ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾಯ9ದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಪ್ರಾಚಾರ್ಯ ಡಾ ಮಹೇಶ್ ಡಿ ಹೊರಕೇರಿ ಅವರು ಅಭಿನಂದನೆಗಳನ್ನು ಸಲ್ಲಿಸಿ, ಶುಭಾಶಯ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 