ಧಾರವಾಡ24: ಕನ್ನಡ ಚಿತ್ರರಂಗದ ಮೇರುನಟ, ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಡಾ. ರಾಜಕುಮಾರ ಅವರದು ಎಲ್ಲರಿಗೂ ಮಾದರಿಯಾಗಿರುವ ವ್ಯಕ್ತಿತ್ವ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಚರಿಸಿದ ಡಾ. ರಾಜಕುಮಾರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ರಾಜಕುಮಾರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಮಾತನಾಡಿದರು.
ಕನ್ನಡ ಚಿತ್ರರಂಗದಲ್ಲಿ ಮೌಲ್ಯಾಧಾರಿತ ಜೀವನವನ್ನು ಪ್ರತಿನಿಧಿಸಿ ಜನಸಾಮಾನ್ಯರಿಗೆ ಅಚ್ಚುಮೆಚ್ಚಿನ ನಟರಾಗಿದ್ದ ಡಾ. ರಾಜಕುಮಾರ ಸರಳ ಜೀವನ, ಉದಾತ್ತ ಚಿಂತನ ಮೈಗೂಡಿಸಿಕೊಂಡಿದ್ದರು.
ಅವರು ಚಿತ್ರಗಳಲ್ಲಿನ ಪಾತ್ರಗಳಿಗೆ ಜೀವ ತುಂಬುವ ಮೂಲಕ ನೈತಿಕ ಬದುಕಿಗೆ ಪ್ರತಿಯೊಬ್ಬರಲ್ಲಿ ಪ್ರೇರಣೆ ತುಂಬುತ್ತಿದ್ದರು. ಅಂತಹ ಜನಮೆಚ್ಚಿದ ನಟ ಅಪರೂಪ ಅವರು ಬದುಕು ಎಲ್ಲರಿಗೂ ಮಾದರಿಯಾಗಿದೆ. ಚುನಾವಣೆ ನೀತಿಸಂಹಿತೆ ಇರುವುದರಿಂದ ಸರಳ ರೀತಿಯಲ್ಲಿ ಜಯಂತಿ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿದರ್ೇಶಕ ಮಂಜುನಾಥ ಡೊಳ್ಳಿನ, ವಾತರ್ಾ ಸಹಾಯಕ ಸುರೇಶ ಹಿರೇಮಠ, ಪ್ರ.ದ.ಸ. ಸಿ.ಬಿ.ಭೋವಿ ಮತ್ತು ಸಿಬ್ಬಂದಿ ವರ್ಗ ಹಾಗೂ ವಿವಿಧ ಇಲಾಖೆ ನೌಕರ ವರ್ಗದವರು ಪಾಲ್ಗೊಂಡಿದ್ದರು.
ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಪ್ರವಾಸ ನಾಳೆಯಿಂದ ಅಹವಾಲು ಸ್ವೀಕಾರ
ಧಾರವಾಡ 24: ಕನರ್ಾಟಕ ಲೋಕಾಯುಕ್ತರ ನಿದರ್ೇಶನದಂತೆ, ಧಾರವಾಡ ಕಛೇರಿಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಏಪ್ರಿಲ್ 26 ರಿಂದ 30ರವರೆಗೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಎಂ.ಬಿ.ಮೊಖಾಶಿ ಅವರು ಏಪ್ರಿಲ್-26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಧಾರವಾಡ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ, ಏಪ್ರಿಲ್-27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಳ್ನಾವರ ಪ್ರವಾಸಿ ಮಂದಿರದಲ್ಲಿ, ಏಪ್ರಿಲ್-29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಲಘಟಗಿ ತಾಲ್ಲೂಕ ಪಂಚಾಯತ್ ಸಭಾಭವನದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವರು.
ಪೊಲೀಸ್ ಇನ್ಸ್ಪೆಕ್ಟರ್ ಶ್ರೀಕಾಂತ ಎಫ್. ತೊಟಗಿ ಅವರು ಏಪ್ರಿಲ್-26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹುಬ್ಬಳ್ಳಿ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ, ಏಪ್ರಿಲ್-27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನವಲಗುಂದ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ, ಏಪ್ರಿಲ್-29ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಣ್ಣಿಗೇರಿ ಪ್ರವಾಸಿ ಮಂದಿರಲ್ಲಿ, ಏಪ್ರಿಲ್-30 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಂದಗೋಳ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ಯಾವುದೇ ಸರಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವ ಬಗ್ಗೆ. ಸರಕಾರದ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡುತ್ತಿರುವ ಬಗ್ಗೆ. ಸರಕಾರದ ಯೋಜನೆಗಳ ಅನುಷ್ಟಾನದಲ್ಲಿ ಅನಗತ್ಯ ವಿಳಂಬ, ಕಳಪೆ ಕಾಮಗಾರಿ ನಡೆಸಿ ಹಣ ದುರುಪಯೋಗ ಪಡಿಸಿದ ಪ್ರಕರಣಗಳ ಬಗ್ಗೆ. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಸಮಯದೊಳಗೆ ಮಾಡಿಕೊಡದೆ, ಅಕ್ರಮ ಸಂಭಾವನೆ (ಲಂಚದ ಹಣ) ಸಲುವಾಗಿ ವಿಳಂಬ ಮಾಡುತ್ತಿರುವ ಬಗ್ಗೆ. ಯಾವುದೇ ಸರಕಾರಿ ಅಧಿಕಾರಿಯು ತಾನು ಕರ್ತವ್ಯ ನಿರ್ವಹಿಸಲು ನಿಯೋಜಿಸಿದ ಕರ್ತವ್ಯವನ್ನು ನಿರ್ವಹಿಸುವಲ್ಲಿ ದುರಾಡಳಿತ ಪ್ರದಶರ್ಿಸುವಂತಹ ಅಧಿಕಾರಿಗಳ ಬಗ್ಗೆ ಪ್ರಪತ್ರ 1 ಮತ್ತು 2 ರಲ್ಲಿ ಅಫಿಡವಿಟ್ ನೊಂದಿಗೆ ಅಗತ್ಯ ದಾಖಲಾತಿಗಳೊಂದಿಗೆ ದೂರನ್ನು ಸಲ್ಲಿಸಬಹುದಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಂತಹ ಪ್ರಕರಣಗಳಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸ್ವೀಕರಿಸಲಾಗುವುದಿಲ್ಲ ಎಂದು ಧಾರವಾಡ ಕನರ್ಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಶಿವಕುಮಾರ.ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ 0836-2447651 ಸಂಪಕರ್ಿಸಬಹುದು.