ಮಹಿಳೆಯರು ನಾನಾ ಕ್ಷೇತ್ರಗಳಲ್ಲಿ ಮಾಡಿರುವ ಸೇವೆಗಳನ್ನು ಸ್ಮರಿಸಿದ ಡಾ. ರಘುವೀರ ಕುಲಕರ್ಣಿ
Dr. Raghuveer Kulkarni remembered the services rendered by women in various fields
ವಿಜಯಪುರ 10 : ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಸನ್ಮಾನಿಸಲಾಯಿತು. ಸೋಮವಾರ ನಡೆದ ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಸಿಂಧು ಪೋತದಾರ ಪಾಲ್ಗೊಂಡು ಮಾತನಾಡಿದರು. ಮಹಿಳೆಯರು ಧೈರ್ಯದಿಂದ ಮುನ್ನಡೆಯಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು ಎಂದು ಹೇಳಿದ ಅವರು, ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯನ್ನು ಸನ್ಮಾನಿಸುವ ಈ ಪ್ರಯತ್ನವನ್ನು ಪ್ರಶಂಸಿಸಿದರು. ಕಾನೂನು ಶಾಲೆಯ ಪ್ರಾಚಾರ್ಯ ಡಾ. ರಘುವೀರ ಜಿ. ಕುಲಕರ್ಣಿ ಮಾತನಾಡಿ, ಮಹಿಳೆಯರು ನಾನಾ ಕ್ಷೇತ್ರಗಳಲ್ಲಿ ಮಾಡಿರುವ ಸೇವೆಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಮಹಿಳಾ ಸಂಘದ ಸಂಯೋಜಕಿ ಸನಾ ಕೌಸರ್ ಮೊಗಲಾಯಿ, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಧನ್ಯವಾದಗಳು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 