ಲೋಕದರ್ಶನ ವರದಿ
ಡಾ.ಶಿವಾನಂದ ಜಮಾದಾರ ಅವರಿಗೆ ಪಿಎಚ್‌ಡಿ
ವಿಜಯಪುರ 01: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ಅಧ್ಯಾಪಕರಾದ ಡಾ.ಶಿವಾನಂದ ಜಮಾದಾರ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರಧಾನ ನೀಡಿದೆ.
ಡಾ.ಜಿ.ಎಚ್.ನಾಗರಾಜ ಅವರ ಮಾರ್ಗದರ್ಶನದಲ್ಲಿ "ಕರ್ನಾಟಕದ ಗ್ರಾಮೀಣ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ": ವಿಶೇಷವಾಗಿ ವಿಜಯಪುರ ಜಿಲ್ಲೆಯನ್ನು ಅನುಲಕ್ಷಿಸಿ 2010 ರಿಂದ 2020 ರವರೆಗೆ" ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿಯನ್ನು ಮೈಸೂರು ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪ್ರಮಾಣವನ್ನು ನೀಡಿದೆ.