01: ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹ ಜರುಗಲಿರುವ ಐತಿಹಾಸಿಕ ಪ್ರಸಿದ್ಧ ದೇವಾಲಯಗಳ ಚಕ್ರವತರ್ಿ ಇಟಗಿ, ಸಾಂಸ್ಕೃತಿಕ ಉತ್ಸವದಲ್ಲಿ ಕೊಡಮಾಡುವ ಪ್ರತಿಷ್ಠಿತ ಚಾಲುಕ್ಯ ವಿಕ್ರಮಾಧಿತ್ಯ ರಾಜ್ಯ ಪ್ರಶಸ್ತಿಗೆ ಮಂಗಳಾ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಚಂದ್ರಕಲಾ ನರಹಟ್ಟಿಯವರ ಉತ್ತಮ ಆರೋಗ್ಯ ಸೇವೆಗಾಗಿ ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಪ್ರಕಟಣೆಯಲ್ಲಿ ತಿಳಸಿದೆ.
ಆರೋಗ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ವಿಶೇಷವಾಗಿ ಮಹಿಳೆಯರಿಗೆ ನೀಡಿದ ಉತ್ತಮ ಆರೋಗ್ಯ ಸೇವೆಯ ಜವಾಬ್ದಾರಿ ಮತ್ತು ಕರ್ತವ್ಯವನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿ ಸಾಮಾನ್ಯ ಜನರ ವಿಶ್ವಾಸ ಗಳಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ದಿ. 3ರ ಗುರುವಾರ ಸಂಜೆ 7 ಗಂಟೆಗೆ ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಇಟಗಿ ಗ್ರಾಮದ ಮಹಾದೇವ ದಂಡನಾಯಕ ವೇದಿಕೆಯಲ್ಲಿ ಜರುಗಲಿರುವ ಇಟಗಿ ಉತ್ಸವದ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಡಾ.ಚಂದ್ರಕಲಾ ನರಹಟ್ಟಿಯವರನ್ನು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ವೇದಿಕೆಯ ರಾಜ್ಯಾಧ್ಯಕ್ಷ ಮಹೇಶ್ಬಾಬು ಸುವರ್ೆ, ನಾಗರಿಕ ವೇದಿಕೆಯ ಜಿಲ್ಲಾಧ್ಯಕ್ಷ ಜಿ.ಎಸ್.ಗೋನಾಳ, ತಿರುಳ್ಗನ್ನಡ ಪ್ರತಿಷ್ಠಾನದ ಅಧ್ಯಕ್ಷ ಎಂ. ಸಾದಿಕ್ ಅಲಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.