ಈಶಾನ್ಯ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟಆಕ್ಷೇಪಣೆ ಮತ್ತು ಸೇರೆ್ಡಗೆ ಡಿಸೆಂಬರ್ 10 ರವರೆಗೆ ಅವಕಾಶ
Draft electoral roll for North East Teachers' Constituency published, objections and additions allo
ಕೊಪ್ಪಳ 27: ಈಶಾನ್ಯ ಕರ್ನಾಟಕ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 3 ರಂದು ಪ್ರಕಟಿಸಲಾಗುವುದು ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಅರ್ಹತಾ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಸದಸ್ಯರ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ನವೆಂಬರ್ 25 ರಂದು ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಕಾರ್ಯಾಲಯಗಳಲ್ಲಿ ಪ್ರಚೂರಪಡಿಸಲಾಗಿದೆ. ಈ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾ ವೆಬ್‌ಸೈಟ್ ಣಣಠಿ://ಞಠಠಿಚಿಟ.ಟಿಛಿ.ಟಿ/ಜಟಿ/ಜಟಜಛಿಣಠ ಮೂಲಕ ಪಡೆಯಬಹುದಾಗಿರುತ್ತದೆ.
ಈ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದಾದರು ಆಕ್ಷೇಪಣೆಗಳಿದ್ದಲ್ಲಿ ಹಾಗೂ ಹೊಸದಾಗಿ ಸೇರೆ್ಡ ಮಾಡಲು ನಮೂನೆ-19ಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳೊಂದಿಗೆ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಲು ಡಿಸೆಂಬರ್ 10 ರವರೆಗೆ ಅವಕಾಶವನ್ನು ಕಲ್ಪಿಸಲಾಗಿದ್ದು, ಡಿ. 10 ರವರಗೆ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಹಾಗೂ ನಮೂನೆ-19 ಹೊಸದಾಗಿ ಸೇರೆ್ಡ ಮಾಡುವ ಅರ್ಜಿಗಳನ್ನು ಡಿ. 25 ರೊಳಗೆ ವಿಲೇಗೊಳಿಸಿ, ಅಂತಿಮ ಮತದಾರರ ಪಟ್ಟಿಯನ್ನು ಡಿ. 30 ರಂದು ಪ್ರಕಟಿಸಲಾಗುವುದು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 