ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ
Dramas are necessary for social transformation
ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ
ಹೂವಿನಹಡಗಲಿ 10: ನಾಟಕಗಳು ಕೇವಲ ಮನರಂಜನೆ ನೀಡುವ ರಂಗ ಕಲೆಯಾಗದೇ ಸಮಾಜದ ಅಂಕುಡೊಂಕು ತಿದ್ದುವ ಸಾಧನವಾಗಿದೆ ಎಂದು ಶಾಸಕರ ಆಪ್ತ ಸಹಾಯಕ ಅರುಣಿ ಸುರೇಶ್ ಹೇಳಿದರು. ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಶ್ರೀ ಕಂಠಿ ಬಸವೇಶ್ವರ ರಥೋತ್ಸವ ಜಾತ್ರಾ ನಿಮಿತ್ತ ಸ್ಥಳೀಯ ಕಲಾವಿದರಿಂದ "ಕಲಿತ ರೈತನ ಕಣ್ಣೀರು " ಸುಂದರ ಸಾಮಾಜಿಕ ನಾಟಕ ದಲ್ಲಿ ಭಾಗವಹಿಸಿ ಮಾತನಾಡಿದ ಅವರುಹಬ್ಬ ಹರಿದಿನ, ಜಾತ್ರೆಗಳ ಸಂದರ್ಭದಲ್ಲಿ ಪೂರ್ವಕಾಲದಿಂದ ಗ್ರಾಮೀಣ ಪ್ರದೇಶದಲ್ಲಿ ಅಭಿನಯಿಸಿರುವ ಸಾಮಾಜಿಕ, ಪೌರಾಣಿಕ, ಐತಿಹಾಸಿಕ ನಾಟಕಗಳು ಸಮಾಜದ ಪರಿವರ್ತನೆಗೆ ಸಂದೇಶ ನೀಡುವ ಸಂವಹನವಾಗಿವೆ. ರಂಗ ಕಲೆ ಅತ್ಯಂತ ಗಟ್ಟಿ ಕಲೆಯಾಗಿದೆ. ಟಿವಿ, ಸಿನೆಮಾ, ಧಾರವಾಹಿಗಳ ಅಬ್ಬರದ ಮಧ್ಯೆಯೂ ರಂಗ ಕಲೆಯನ್ನು ಪ್ರೋತ್ಸಾಹಿಸುತ್ತಾರೆ ಎಂದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅದ್ಯಕ್ಷ ವಿ.ಬಿ.ಜಗದೀಶ ಮಾತನಾಡಿ ಇಂದಿನ ಬದುಕಿನ ಒತ್ತಡದಲ್ಲಿ ನಾಟಕಗಳು ಮನೋರಂಜನೆ ನೀಡುತ್ತೇವೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದಬಿಜೆಪಿ ಮಂಡಲ ಅದ್ಯಕ್ಷ ಹಣ್ಣಿ ಶಶಿಧರ ಮಾತನಾಡಿ ನಾಟಕಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮಾಧ್ಯಮವಾಗಿದೆ ಎಂದರು. ನಾಟಕ ವ್ಯವಸ್ಥಾಪಕ ಜಿ.ವಿನಾಯಕ.ಗ್ರಾ.ಪಂ.ಮಾಜಿ ಅದ್ಯಕ್ಷ ಕಂಠಿವೀರೇಶ.ಅಂಗಡಿ ಬಸವರಾಜ. ವಿ.ಬಿ.ಮಲ್ಲಿಕೇಶ್. ಚಂದ್ರ್ಪ.ಜಿ.ಮಲ್ಲಪ್ಪ ಇದ್ದರು.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 