ಮಕ್ಕಳಿಗೆ ಶೈಕ್ಷಣಿಕ ವಾತಾವರಣ ಕಲ್ಪಿಸುವ ಕನಸು: ಶಾಸಕ ರಾಜುಗೌಡ
Dream of creating an educational environment for children: MLA Rajugowda
ದೇವರಹಿಪ್ಪರಗಿ 211: ‘ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಹಾಗೂ ಪಾಲಕರ ಪಾತ್ರ ಬಹುಮುಖ್ಯ, ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವುದೇ ನಮ್ಮ ಕನಸಾಗಿದೆ’ ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.ತಾಲ್ಲೂಕಿನ ಮಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣೂರ ತಾಂಡಾ-1 ಗ್ರಾಮದಲ್ಲಿ ಬುಧವಾರ 2024-25ನೇ ಸಾಲಿನ ಶಿಕ್ಷಣ ಇಲಾಖೆಯ ಅನುದಾನ ಅಡಿಯಲ್ಲಿ,ಜಿಪಂ ಪಂ.ರಾ.ಇಲಾಖೆ ಉಪವಿಭಾಗ ಸಿಂದಗಿ ವತಿಯಿಂದ ಸುಮಾರು ?14.50 ಲಕ್ಷ ರೂ, ವೆಚ್ಚದ ಅನುದಾನದಲ್ಲಿ ಗ್ರಾಮದ ಶಾಲೆಯಲ್ಲಿ ಹೆಚ್ಚುವರಿ ಕೊಠಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು,ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಶಾಲೆ ಕಟ್ಟಡದ ಕೊರತೆ ನೀಗಿಸುವ ಭಾಗ್ಯ ಇದೀಗ ಒದಗಿ ಬಂದಿದೆ. ಗ್ರಾಮದ ಜನತೆಯ ಕನಸು ನನಸಾದಂತಾಗಿದೆ. ಶಾಲಾ ಶಿಕ್ಷಕರು ಮಕ್ಕಳಿಗೆ ಉತ್ತಮ ಗುಣಮಟ್ಟ ಶಿಕ್ಷಣ ನೀಡುವಂತೆ ಶಿಕ್ಷಕರಿಗೆ ಸಲಹೆ ನೀಡಿದರು.
ಶಾಲಾ ಪರಿಸರವನ್ನು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಹಸರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಹಾಗೂ ಇಂದು ಮಣೂರ ತಾಂಡಾ -2 ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ 14.50ಲಕ್ಷ ರೂ ವೆಚ್ಚದ ಹಾಗೂ ಮಣೂರ ಗ್ರಾಮದ ಅಂಗನವಾಡಿ ಕಟ್ಟಡಕ್ಕೆ ಸುಮಾರು 18 ಲಕ್ಷ ರೂ ವೆಚ್ಚದ ಕಟ್ಟಡದ ನಿರ್ಮಾಣಕ್ಕೆ ಅನುದಾನ ನೀಡಲಾಗಿದ್ದು, ಬರುವಂಥ ದಿನಗಳಲ್ಲಿ ಗ್ರಾಮದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಹಾಗೂ ಕ್ಷೇತ್ರದಲ್ಲಿ ಆದ್ಯತೆಯ ಮೇರೆಗೆ ಶಾಲೆಯ ಕೊಠಡಿಗಳು ಅಂಗನವಾಡಿ ಶೌಚಾಲಯಗಳನ್ನು ದುರಸ್ತಿ ಮೂಲಭೂತ ಸೌಕರ್ಯಗಳನ್ನು ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಸಂದರ್ಭದಲ್ಲಿ ಭೂಮಿ ಪೂಜೆ ನೆರವೇರಿಸಲು ಬಂದ ಶಾಸಕರಿಗೆ ಗ್ರಾಮಸ್ಥರು ಸನ್ಮಾನಿಸಿದರು.ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಶೇಖರಗೌಡ ಪಾಟೀಲ(ಕೋರವಾರ), ಕೇಸು ರಾಠೋಡ, ಸಿಂದಗಿ ಸಿಡಿಪಿಒ ಅನೀಲ ಹಳ್ಳಿ,ಗ್ರಾ.ಪಂ ಸದಸ್ಯರಾದ ಮಲ್ಕಪ್ಪ ಬಾಗೇವಾಡಿ ಅಭಿಯಂತರರಾದ ಪ್ರಫುಲಕುಮಾರ,ಶಂಕರಗೌಡ ಬಿರಾದಾರ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷೆ, ಸರ್ವ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 