ಕೊಪ್ಪಳ 07: ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಇಂದು ಆಯೋಜಿಸಲಾಗಿದ್ದ ``ಕುಡಿಯುವ ನೀರು, ನೈರ್ಮಲ್ಯ ಹಾಗೂ ಆರೋಗ್ಯ ಕಾರ್ಯಕ್ರಮಗಳ'' ಕುರಿತು ಜನಜಾಗೃತಿ ವಸ್ತು ಪ್ರದರ್ಶನಕ್ಕೆ ಎನ್.ಇ.ಕೆ.ಎಸ್.ಆರ್.ಟಿ.ಸಿ. ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಮಹಮ್ಮದ ಫೈಜ್ರವರು ಚಾಲನೆ ನೀಡಿದರು.
``ಕುಡಿಯುವ ನೀರು, ನೈರ್ಮಲ್ಯ ಹಾಗೂ ಆರೋಗ್ಯ ಕಾರ್ಯಕ್ರಮಗಳ'' ಕುರಿತು ಜನಜಾಗೃತಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಆಗಸ್ಟ್. 07 & 08 ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದು, ತಾಯಿ ಕಾಡರ್್, ರಕ್ತ ಹೀನತೆ ತಡೆಗಟ್ಟುವುದು, ಗೃಹ ಆಧಾರಿತ ನವಜಾತ ಶಿಶು ಆರೈಕೆ, ಮಕ್ಕಳ ಅಪೌಷ್ಠಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರಗಳನ್ನು ಸ್ಥಾಪಿಸಿರುವುದು, ``ಸಂಪೂರ್ಣ ಲಸಿಕೆ-ಪರಿಪೂರ್ಣ ಆರೋಗ್ಯ' ಧ್ಯೇಯ ವಾಕ್ಯದಡಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಕುರಿತು ಅಂಶಗಳ ವಿವರಣೆ, ಐದು ವರ್ಷದಲ್ಲಿ ಏಳು ಬಾರಿ ಲಸಿಕೆ ತಪ್ಪದೇ ಹಾಕಿಸುವುದು, ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರಗಳ ಸ್ಥಾಪನೆಯ ಮೂಲಕ ಎಲ್ಲರಿಗೂ ಆರೋಗ್ಯ-ಎಲ್ಲೆಡೆಯೂ ಆರೋಗ್ಯ, ಡೆಂಗ್ಯು ಜ್ವರ ಹರಡದಂತೆ ಎಚ್ಚರ, ಕ್ಷಯ ರೋಗದ ಲಕ್ಷಣಗಳು ಮತ್ತು ನಿಯಂತ್ರಣದ ಕ್ರಮಗಳು, ಸೇವೆಯ ಕ್ರಮಗಳ ಕುರಿತು ಸಂಪೂರ್ಣ ಮಾಹಿತಿಯನ್ನೊಳಗೊಂಡ ಬೃಹತ್ ಫಲಕಗಳನ್ನು ಪ್ರದರ್ಶನಕ್ಕಿಡಲಾಗಿದೆ.
ಜನಜಾಗೃತಿ ವಸ್ತು ಪ್ರದರ್ಶನವನ್ನು ಎನ್.ಇ.ಕೆ.ಎಸ್.ಆರ್.ಟಿ.ಸಿ. ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಮಹಮ್ಮದ ಫೈಜ್ರವರು ವೀಕ್ಷಿಸಿ, ಕುಡಿಯುವ ನೀರು, ನೈರ್ಮಲ್ಯ ಹಾಗೂ ಆರೋಗ್ಯದ ಬಗ್ಗೆ ಅಗತ್ಯ ಮಾಹಿತಿಯನ್ನೊಳಗೊಂಡ ಈ ಜನಜಾಗೃತಿ ವಸ್ತು ಪ್ರದರ್ಶನವನ್ನು ಎಲ್ಲಾ ಸಾರ್ವಜನಿಕರು ವೀಕ್ಷಣೆ ಮಾಡುವುದು ಅತ್ಯವಶ್ಯಕವಾಗಿದೆ ಎಂದರು.
ಈಶಾನ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದ ಬಿರಾದರ, ಕೊಪ್ಪಳ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಂ. ಅವಿನಾಶ, ಎಂ. ಪಾಂಡುರಂಗ ಹಾಗೂ ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.