ಸಂದಿಗ್ಧ ಚಲನಚಿತ್ರ ಪ್ರದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಕೊಪ್ಪಳ 16: ಬಾಲ್ಯ ವಿವಾಹದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಬಾಲ್ಯ ವಿವಾಹ ತಡೆ ಕುರಿತಾದ "ಸಂದಿಗ್ಧ" ಚಲನಚಿತ್ರ ಪ್ರದರ್ಶನ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಜ್ಯೋತಿ ಬೆಳಗಿಸುವರದರ ಮೂಲಕ ಬುಧವಾರದಂದು ಚಾಲನೆ ನೀಡಿದರು.  

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕನರ್ಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಬೆಂಗಳೂರು, ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಮರ್ಿಕ ಇಲಾಖೆ, ಯುನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಿಲರ್ೋಸ್ಕರ್ ಫೆರಸ್ ಇಂಡಸ್ಟ್ರೀಲ್ ಲಿ. ಬೇವಿನಹಳ್ಳಿ, ಜೆ.ಎನ್.ವೈ. ಪ್ರೋಡಕ್ಷನ್ಸ್ ಬೆಂಗಳೂರು ಇವರ ಸಹಯೋಗದಲ್ಲಿ ಬಾಲ್ಯ ವಿವಾಹ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇಂದಿನಿಂದ ಜ. 30 ರವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾದ "ಸಂದಿಗ್ಧ" ಚಲನಚಿತ್ರ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಆಯೋಜಿಸಲಾತ್ತು.

ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ, ಕನರ್ಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ. ವನೀತಾ ತೊರವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕ ಈರಣ್ಣ ಪಂಚಾಳ್, ಡಿ.ವೈ.ಎಸ್.ಪಿ. ಸಂದೀಗವಾಡ್, ಯುನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ ಹಾಗೂ ರಾಘವೇಂದ್ರ ಭಟ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿರೇಂದ್ರ ನಾವದಗಿ, "ಸಂದಿಗ್ಧ" ಚಲನಚಿತ್ರ ನಿದರ್ೇಶಕ ಸುಚೇಂದ್ರ ಪ್ರಸಾದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮಕ್ಕಳ ರಕ್ಷಣಾ ಘಟಕದ ಸದಸ್ಯರು ಉಪಸ್ಥಿತರಿದ್ದರು.  ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥರೆಡ್ಡಿ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಸೇರಿಂದ ಎಲ್ಲಾ ಗಣ್ಯರು ಶಾಲಾ ಮಕ್ಕಳೊಂದಿಗೆ ಸಂದಿಗ್ಧ ಚಲನಚಿತ್ರವನ್ನು ಇದೇ ಸಂದರ್ಭದಲ್ಲಿ ವೀಕ್ಷಣೆ ಮಾಡಿದರು.