ಲೋಕದರ್ಶನ ವರದಿ
ವಿಜಯಪುರ 12:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವರ ಆಶ್ರಯದಲ್ಲಿ ಹಮ್ಮಿಕೊಂಡ ಸಾವಯವ ಹಾಗೂ ಸಿರಿಧಾನ್ಯ ಮೇಳದಲ್ಲಿ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀಗಳು ಸಾನಿಧ್ಯ ವಹಿಸಿದ್ದರು.
ಇದೇ ಜನವರಿ 12 ಹಾಗೂ 13 ರಂದು ನಗರದ ಎಸ್.ಎಸ್. ಹೈಸ್ಕೂಲ್ ಆವರಣದಲ್ಲಿ ಜರುಗಿದ ಈ ಮೇಳವು ಜ.12 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳು ಸಾನಿಧ್ಯ ವಹಿಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ಸಿಗೊಳಿಸುವಂತೆ ಜಂಟಿ ಕೃಷಿ ನಿದರ್ೇಶಕ ಡಾ.ಶಿವಕುಮಾರ ತಿಳಿಸಿದ್ದಾರೆ.
ಸಿರಿಧಾನ್ಯ ನಡಿಗೆ : ಸಾವಯವ ಹಾಗೂ ಸಿರಿಧಾನ್ಯ ಮೇಳದ ಅಂಗವಾಗಿ ಇಂದು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಹಮ್ಮಿಕೊಂಡ ಸಿರಿಧಾನ್ಯ ನಡಿಗೆಗೆ ಮಹಾನಗರ ಪಾಲಿಕೆ ಆಯುಕ್ತ ಡಾ.ಔದ್ರಾಮ ಅವರು ಚಾಲನೆ ನೀಡಿದರು. ಸಿರಿಧಾನ್ಯ ನಡಿಗೆ ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿದರ್ೇಶಕ ಡಾ.ಶಿವಕುಮಾರ ಸೇರಿದಂತೆ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.