21 ನೇ ಜಾನುವಾರು ಗಣತಿಗೆ ಚಾಲನೆ
ಹಾನಗಲ್ 11: ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯಿಂದ ಕೈಗೊಳ್ಳಲಾಗಿರುವ 21 ನೇ ಜಾನುವಾರು ಗಣತಿ 2024 ಹಿನ್ನೆಲೆಯಲ್ಲಿ ಪ್ರಕಟಿಸಲಾಗಿರುವ ಕರಪತ್ರಗಳನ್ನು ಅನಾವರಣಗೊಳಿಸುವ ಮೂಲಕ ಇಲ್ಲಿ ಶಾಸಕ ಶ್ರೀನಿವಾಸ ಮಾನೆ ಗಣತಿಗೆ ಚಾಲನೆ ನೀಡಿದರು.
ಪ್ರತಿ ಐದು ವರ್ಷಗಳಿಗೊಮ್ಮೆ ನಡೆಯುವ ಗಣತಿಯಿಂದ ಪಶು ಸಂಗೋಪನೆ ಅಭಿವೃದ್ಧಿ, ಮೇವಿನ ಲಭ್ಯತೆ,ಆರೋಗ್ಯ, ಓಷಧೋಪಚಾರ, ಉತ್ಪಾದಕತೆ ಹೆಚ್ಚಿಸಲು ಹಾಗೂ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗಲಿದೆ.ಒಂದು ಊರೂ ಸಹ ಬಿಡದಂತೆ ಎಲ್ಲ ಕಡೆಗಳಲ್ಲಿ ತೆರಳಿ ಗಣತಿ ಕಾರ್ಯದಲ್ಲಿ ಸಮರ್ಕವಾಗಿ ತೊಡಗಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಶಾಸಕ ಮಾನೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯ ಪಶು ವೈದ್ಯಾಧಿಕಾರಿ ಡಾ.ಗೀರೀಶ ರೆಡ್ಡೇರ ಮಾತನಾಡಿ, ತಾಲೂಕಿನಲ್ಲಿ 14 ಜನ ಗಣತಿದಾರರು ಗಣತಿ ಕಾರ್ಯದಲ್ಲಿ ತೊಡಗಲಿದ್ದು, ಮೂವರು ವೈದ್ಯಾಧಿಕಾರಿಗಳು ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಗಣತಿ ಕಾರ್ಯದಲ್ಲಿ ಜಾನುವಾರುಗಳ ಪರಿಪೂರ್ಣ ಮಾಹಿತಿ ಸಂಗ್ರಹಿಸಲಾಗುವುದು ಎಂದು ತಿಳಿಸಿದರು.