ಭೂ ಸುರಕ್ಷಾ ಯೋಜನೆಯಡಿಯಲ್ಲಿ ಕಂದಾಯ ಇಲಾಖೆಯ ಭೂ ದಾಖಲೆಗಳ ಗಣಕೀಕರಣಗೊಳಿಸುವ ಸ್ಕ್ಯಾನ್ ಕೊಠಡಿಗೆ ಚಾಲನೆ
ಬ್ಯಾಡಗಿ 09 : ಕಂದಾಯ ಇಲಾಖೆಯ ಭೂ ದಾಖಲೆಗಳನ್ನು ಸುರಕ್ಷಿತವಾಗಿಡಲು ಮತ್ತುರೈತರಿಗೆ ಶೀಘ್ರವಾಗಿ ದಾಖಲೆಗಳನ್ನು ಒದಗಿಸುವ ಉದ್ದೇಶದಿಂದ ಗಣಕೀಕರಣ ಮಾಡಲಾಗುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ಗುರುವಾರ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿಯಲ್ಲಿ ಕಂದಾಯ ಇಲಾಖೆಯ ಭೂ ದಾಖಲೆಗಳ ಗಣಕೀಕರಣಗೊಳಿಸುವ ಸ್ಕ್ಯಾನ್ ಕೊಠಡಿಗೆ ಚಾಲನೆ ನೀಡಿ ಮಾತನಾಡಿದರು. ಗುಣಮಟ್ಟದ ಸೇವೆಗಳು ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಮಾಹಿತಿ ಮತ್ತು ಭೂ ದಾಖಲೆಗಳು ಶೀಘ್ರ ಒದಗಿಸುವ ನಿಟ್ಟಿನಲ್ಲಿ ಕಂಪ್ಯೂಟರ್ ಆಪರೇಟರ್ಗಳು ಕೆಲಸ ಮಾಡಬೇಕು ಎಂದು ತಿಳಿಸಿದರು.ಶಿಥಿಲಗೊಂಡ ದಾಖಲೆಗಳನ್ನು ಶಾಶ್ವತವಾಗಿ ಡಿಜಿಟಲ್ ರೂಪದಲ್ಲಿ ಉಳಿಸಿಕೊಳ್ಳಲು, ನಕಲಿ ದಾಖಲೆಗಳ ಹಾವಳಿ ತಡೆಯಲು, ಸಾರ್ವಜನಿಕರ ಅನಗತ್ಯ ಅಲೆದಾಟ ತಪ್ಪಿಸಲು ಮತ್ತು ಅಂತಹ ಮೂಲ ದಾಖಲೆಗಳು ಸಾರ್ವಜನಿಕರಿಗೆ ಆನ್ಲೈನ್ ಮೂಲಕ ದೊರೆಯುವಂತೆ ಮಾಡಲು ರಾಜ್ಯ ಸರ್ಕಾರ ಭೂ ಸುರಕ್ಷಾ ಯೋಜನೆ ಜಾರಿಗೆ ತಂದಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ಫಿರೋಜಾಷಾ ಸೋಮನಕಟ್ಟಿ, ಮಾರುತಿ ಅಚ್ಚಿಗೇರಿ, ಶಿರಸ್ತೇದಾರರಾದ ನಾಗರಾತ್ನ ಕಾಳೆ, ಮಂಜುಳಾ ನಾಯ್ಕ, ಆರ್ ಕಡಕೋಳ, ನಾಗರಾಜ ಹಿರೇಗೌಡ್ರ, ನವೀನ ಚಿಕ್ಕಣಜಿ, ಗೀರೀಶ ಬಾಗೇವಾಡೆ, ಶಶಿಧರ ಹಿರೇಮಠ ಸೇರಿದಂತೆ ಇತರರಿದ್ದರು.