ರಾಯಬಾಗ 09: ಮತ ಕ್ಷೇತ್ರದ ಸವರ್ಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಬರುವ ದಿನಗಳಲ್ಲಿ ಎಲ್ಲ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗವುದು ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ರವಿವಾರ ತಾಲೂಕಿನ ನಸಲಾಪೂರ ಗ್ರಾಮದಲ್ಲಿ ನಸಲಾಪೂರ ದಿಂದ ಬಾವನಸೌಂದತ್ತಿ ಗ್ರಾಮದ ಅವರೆಗೆ ಲೋಕೋಪಯೋಗಿ ಇಲಾಖೆಯಡಿ ಮಂಜೂರಾದ 1 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾವು ವಿರೋಧ ಪಕ್ಷದಲ್ಲಿ ಇದ್ದರು ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ನೀರಾವರಿ ಮತ್ತು ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಸುಧಾರಣೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಡಿ.ಕೆ.ಎಸ್.ಎಸ್.ಕೆ ನಿದರ್ೇಶಕ ಭರತೇಶ ಬನವಣೆ, ಬಿಜೆಪಿ ರಾಯಬಾಗ ಮಂಡಲ ಅಧ್ಯಕ್ಷ ಸದಾನಂದ ಹಳಿಂಗಳಿ, ಬಾಳಾಸಾಬ ಸಮಾಜೆ, ಚೌಗೌಡ ಪಾಟೀಲ, ವಿಜಯ ಕೋಠಿವಾಲೆ, ಬಾಳಾಸಾಬ ಪಾಟೀಲ, ಸದಾಶಿವ ಘೋರ್ಪಡೆ, ಸಮೀರ ಪವಾರ ಸೇರಿದಂತೆ ಅನೇಕರು ಇದ್ದರು.