ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

ಲೋಕದರ್ಶನ ವರದಿ

ಮುಗಳಖೋಡ 11:  ಯಲ್ಲಾಲಿಂಗೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಮಠದ ಸುತ್ತ ಮುತ್ತ ಬೀದಿಗಳು ಸ್ವಚ್ಛತೆಯಿಂದ ಕಂಗೊಳಿಸುತ್ತಿದ್ದು ಪುರಸಭೆ ಕಾಯರ್ಾಲಯದಿಂದ ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು ಜಾತ್ರೆ ಮುಗಿಯುವವರೆಗು ಅಗತ್ಯಕ್ರಮ ಕೈಗೊಳ್ಳಲಾಗುವುದು. ಮುಗಳಖೋಡ ಕ್ರಾಸ್ದಿಂದ ಬೀದಿ ದೀಪ ಅಳವಡಿಸುವದು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗುವದೆಂದು  ಪುರಸಭೆ ಮುಖ್ಯಾಧಿಕಾರಿ ಜಿ.ಬಿ.ಢಂಬಳ ಪತ್ರಿಕೆಗೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಮೇಶ ಖೇತಗೌಡರ ಹಾಗೂ ಸಿಬ್ಬಂದಿ ವರ್ಗ ಇದ್ದರು.