ಹಾವೇರಿ22: ದಿನದಿಂದ ದಿನಕ್ಕೆ ಅರಣ್ಯ ನಾಶವಾಗುತ್ತಿದ್ದು, ಇದರಿಂದ ಭೂಮಿಯ ತಾಪಮಾನ ಹೆಚ್ಚಾಗಿ ವಾತಾವರಣದಲ್ಲಿ ಅಸಮತೋಲನ ಉಂಟಾಗುತ್ತಿದೆ ಹಾಗೂ ಅತೀವೃಷ್ಟಿ -ಅನಾವೃಷ್ಠಿಗಳು ಸಂಭವಿಸುತ್ತಿವೆ. ಪರಿಸರ ಕಾಪಾಡುವಲ್ಲಿ ಯುವಜನತೆ ಹಾಗೂ ವಿದ್ಯಾಥರ್ಿಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಹೇಳಿದರು.
ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಹಾವೇರಿ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ವಿಜ್ಞಾನ ಪರಿಷತ್ ಸಹಯೋಗದಲ್ಲಿ ನಗರದ ಡಿ.ದೇವರಾಜ ಅರಸುಭವನದಲ್ಲಿ ಜರುಗಿದ ಹಾವೇರಿ ಜಿಲ್ಲಾ ಪರಿಸರ ಮಿತ್ರ ಶಾಲೆ2018-19ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮೊದಲು ಭೂಮಿಯಲ್ಲಿ ಶೇ.60 ರಷ್ಟು ಅರಣ್ಯ ಪ್ರದೇಶವಿತ್ತು. ನಂತರದ ದಿನಗಳಲ್ಲಿ ಜನಸಂಖ್ಯೆ ಹೆಚ್ಚಳದಿಂದ ನಗರೀಕಣ ಹೆಚ್ಚಾದಂತೆ ಅರಣ್ಯ ವಾಶವಾಗುತ್ತಿದೆ. ನೈಸಗರ್ಿಕ ಕಾಡುಗಳನ್ನು ನಾಶಮಾಡಿ ಕಾಂಕ್ರೀಟ್ ಕಾಡುಗಳನ್ನು ನಿಮರ್ಾಣ ಮಾಡಲಾಗುತ್ತಿದೆ. ಇದರಿಂದ ಪ್ರಾಣಿ ಹಾಗೂ ಪಕ್ಷಿ ಸಂಕುಲ ಸೇರಿದಂತೆ ಸೂಕ್ಷ್ಮ ಜೀವಿಗಳ ಸಂತತಿ ಅವನತಿಯ ಅಂಚಿಗೆ ತಲುಪಿವೆ ಎಂದು ಹೇಳಿದರು.
ಪ್ರತಿಯೊಬ್ಬರೂ ಪರಿಸರ ಕಾಳಜಿ ಹೊಂದುವುದು ಅಗತ್ಯವಾಗಿದೆ. ಪರಿಸರವನ್ನು ನಾವು ಕಾಪಾಡಿದರೆ ಪರಿಸರ ನಮ್ಮನ್ನು ಕಾಪಾಡುತ್ತದೆ. ಮುಂದಿನ ಪೀಳಿಗೆಗೆ ಪರಿಶುದ್ಧ ಪರಿಸರ ನೀಡುವ ಜವಾಬ್ದಾರಿ ಇಂದಿನ ಯುವಜನತೆ ಹಾಗೂ ವಿದ್ಯಾಥರ್ಿಗಳ ಮೇಲಿದೆ ಎಂದು ಹೇಳಿದರು.
ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಅವರು ಮಾತನಾಡಿ, ಪರಿಸರವನ್ನು ಸ್ವಚ್ಛತೆಯಿಂದ ಹಾಗೂ ಕಾಳಜಿಯಿಂದ ನೋಡಿಕೊಳ್ಳುವುದು ನಮ್ಮೆಲ್ಲರ ಸಂವಿಧಾನಾತ್ಮಕ ಕರ್ತವ್ಯವಾಗಿದೆ. ಇಂದಿನಿಂದಲೇ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಡೈನೋಸರ್ ಅವನತಿ ಹೊಂದಿದಂತೆ ಮುಂದೊಂದು ದಿನ ಮನುಷ್ಯ ಸಂಕುಲ ನಾಶವಾಗಬಹುದೆಂದು ವಿಷಾಧ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಶಿಕ್ಷಕರ ತರಬೇತಿ ಕೇಂದ್ರದ ಪ್ರಾಂಶುಪಾಲರು ಹಾಗೂ ಉಪನಿದರ್ೆಶಕರಾದ(ಅಭಿವೃದ್ಧಿ) ಜಿ.ಎಂ.ಬಸವಲಿಂಗಪ್ಪ ಅವರು ಮಾತನಾಡಿ, ಪರಿಸರ ಸಂರಕ್ಷಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಗಿಡಗಳನ್ನು ಬೆಳೆಸಬೇಕು. ಇದರಿಂದ ಅರಣ್ಯ ಸುಧಾರಿಸುತ್ತದೆ ಹಾಗೂ ಪರಿಸರದಲ್ಲಿ ಶುದ್ಧವಾದ ಗಾಳಿ ದೊರೆಯುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕನಸು-ನನಸು ಪುಸ್ತಕ ಬಿಡುಗಡೆಗೊಳಿಸಿದ ಜಿಲ್ಲಾ ವಿಜ್ಞಾನ ಪರಿಷತ್ ಅಧ್ಯಕ್ಷ ಎಸ್.ಬಿ.ಹಿರೇಮಠ ಅವರು ಮಾತನಾಡಿ, ಅಗ್ನಿ, ವಾಯು, ಜಲ ಹಾಗೂ ಇನ್ನಿತರ ಜೀವ ಸಂಕುಲದಿಂದ ಪರಿಸರ ಒಳಗೊಂಡಿದೆ. ಪ್ರಕೃತಿ ಎಂದರೆ ಪರಿಸರ, ಪರಿಸರ ಎಂದರೆ ಪ್ರಕೃತಿ. ಪರಿಸವನ್ನು ನಾಶಮಾಡದೆ ಅದನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯವಾಗಿದ ಎಂದು ಹೇಳಿದರು.
ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ಎಂ.ಎಸ್.ಮಹೇಶ್ವರಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಒಂದು ಜಿಲ್ಲಾ ಪರಿಸರ ಮಿತ್ರ ಶಾಲೆ, 10 ಹಸಿರು ಮಿತ್ರ ಶಾಲೆಗಳು ಹಾಗೂ 10 ಹಳದಿ ಶಾಲೆಗಳು ಸೇರಿ ಒಟ್ಟು 21 ಶಾಲೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಎಂದು ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ರೇಣುಕಾ ಗುಡಿಮನಿ, ಕೃಷ್ಣ ಜವಳಿ ಇತರರು ಉಪಸ್ಥಿತರಿದ್ದರು.