ಲೋಕದರ್ಶನ ವರದಿ
ವಿಜಯಪುರ 25:ಜಿಲ್ಲೆಯಲ್ಲಿ ಇದೇ ಮಾಚರ್್ 1 ರಿಂದ 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾಷರ್ಿಕ ಪರೀಕ್ಷೆಗಳನ್ನು ನಕಲುಮುಕ್ತವಾಗಿ, ಪಾರದರ್ಶಕ ಪರೀಕ್ಷೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ದ್ವಿತೀಯ ಪಿಯುಸಿ ವಾಷರ್ಿಕ ಪರೀಕ್ಷೆಗೆ ಸಂಬಂಧಿಸಿದಂತೆ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಒಟ್ಟಾರೆ ಫಲಿತಾಂಶವನ್ನು ಹೆಚ್ಚಿಸುವುದು ಅಷ್ಟೇ ಅಲ್ಲದೇ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕ, ಹಾಗೂ ನ್ಯಾಯಸಮ್ಮತವಾಗಿ ನಕಲು ಮುಕ್ತ ಪರೀಕ್ಷೆ ನಡೆಸುವುದು ಅಷ್ಟೇ ಮುಖ್ಯವಾಗಿದೆ. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಗಳಿಗೆ ರವಾನೆ, ಅಂಚೆ ಕಚೇರಿಗೆ ತಲುಪಿಸುವರೆಗೂ ಪರೀಕ್ಷಾ ಪ್ರಕ್ರಿಯೆ ಪ್ರತಿ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲೆಯ ಒಟ್ಟು 41 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಿಂದ ಪರೀಕ್ಷೆಗೆ 26701 ವಿದ್ಯಾಥರ್ಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರದ ವ್ಯಾಪ್ತಿಯ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಎಂದು ಗುರುತಿಸುವ ರೇಖೆಯನ್ನು ಕಡ್ಡಾಯವಾಗಿ ಹಾಕಬೇಕು. ಪರೀಕ್ಷಾ ಕೇಂದ್ರದ ವ್ಯಾಪ್ತಿಯೊಳಗೆ ಯಾವುದೇ ಅನಧಿಕೃತ ವ್ಯಕ್ತಿ ಪ್ರವೇಶಿಸುವಂತಿಲ್ಲ. ಕೇಂದ್ರ ವ್ಯಾಪ್ತಿಯಲ್ಲಿರುವ ಎಲ್ಲ ಝರಾಕ್ಸ್ ಅಂಗಡಿಗಳನ್ನು ಮುಚ್ಚಬೇಕು. ಈ ಎಲ್ಲ ಜವಾಬ್ದಾರಿಗಳನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ನಿರ್ವಹಿಸಬೇಕು ಎಂದು ಹೇಳಿದರು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯನ್ನು ಅಳವಡಿಸಲಾಗಿದ್ದು, ಪ್ರತಿ ಪರೀಕ್ಷಾ ನಂತರ ಆ ದೃಶ್ಯಾವಳಿಗಳನ್ನು ಪೆನ್ ಡ್ರೈವ್ನಲ್ಲಿ ಶೇಖರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಹಾಗೂ ಉಪನಿದರ್ೇಶಕರ ಕಚೇರಿಗೆ ತಲುಪಿಸಬೇಕು. ಒಟ್ಟಾರೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ, ಪಾರದರ್ಶಕವಾಗಿ ನಡೆಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ವೈ.ಎಸ್.ಅಮಾತೆ, ಡಿಡಿಪಿಐ ಎಂ.ಎಂ.ಸಿಂಧೂರ, ಜಿಲ್ಲಾ ಖಜಾನೆ ಅಧಿಕಾರಿ ಡಾ.ವಿನಯಕುಮಾರ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರು, ತಹಶೀಲ್ದಾರರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.